ಐಪಿಎಲ್ 2020: ಪಂದ್ಯಾವಳಿಯಿಂದ ಹೊರ ನಡೆದ ಸುರೇಶ್ ರೈನಾ!

0
235
Tap to know MORE!

ಚೆನ್ನೈ ಸೂಪರ್ ಕಿಂಗ್ಸ್‌ನ ಆಲ್ರೌಂಡರ್ ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ಮರಳಿದ್ದು, ಇಡೀ ಐಪಿಎಲ್ 2020 ಋತುವನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿಯು ಇಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ : ಸಿಎಸ್‌ಕೆ ತಂಡದ ಓರ್ವ ಬೌಲರ್ ಮತ್ತು 12 ಮಂದಿ ಸಿಬ್ಬಂದಿಗಳಿಗೆ ಕೊರೋನಾ !!

“ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಾಗಿ ಯುಎಇಯಿಂದ ಭಾರತಕ್ಕೆ ಮರಳಿದ್ದಾರೆ ಮತ್ತು ಐಪಿಎಲ್ 2020 ಋತುವಿನಲ್ಲಿ ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ” ಎಂದು ತಂಡದ ಸಿಇಒ ಕೆ.ಎಸ್. ವಿಶ್ವನಾಥನ್ ತಮ್ಮ ಅಧಿಕೃತ ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

ಸುರೇಶ್ ರೈನಾ ಸೋದರತ್ತೆ ಕುಟುಂಬದ ಮೇಲೆ ಹಲ್ಲೆ – ಸೋದರ ಮಾವ ಸಾವು!

ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ಮರಳಿದ್ದಾರೆ ಮತ್ತು ಉಳಿದ ಐಪಿಎಲ್ ಋತುವಿನಲ್ಲಿ ಲಭ್ಯವಿರುವುದಿಲ್ಲ. ಇದು ತಂಡಕ್ಕೆ ಭಾರಿ ಪೆಟ್ಟು ನೀಡಿದೆ. ನಿನ್ನೆಯಷ್ಟೇ, ತಂಡದ ಓರ್ವ ಬೌಲರ್ ಮತ್ತು ಸುಮಾರು 12 ಸಿಬ್ಬಂದಿಗಳಿಗೆ ಕೊರೋನಾ ದೃಢಪಟ್ಟಿತ್ತು.

LEAVE A REPLY

Please enter your comment!
Please enter your name here