ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ : ಡಾ| ಅಶ್ವತ್ಥ್ ನಾರಾಯಣ್

0
67

ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ಪರೀಕ್ಷೆಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಈ ಕಾರಣಕ್ಕಾಗಿ ವಿದ್ಯಾರ್ಥಿಗಳು ಪಾವತಿಸಿದ ಪರೀಕ್ಷಾ ಶುಲ್ಕವನ್ನು ಮರುಪಾವತಿಸಬೇಕು ಎಂಬ ಬೇಡಿಕೆ ಕೇಳಿಬಂದಿತ್ತು. ಇದೀಗ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗುವುದು ಎಂದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್-19 ಹಿನ್ನೆಲೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷೆ ಸಂಬಂಧ ಕೆಲವು ವಿಶ್ವವಿದ್ಯಾಲಯಗಳು ಮಾರ್ಚ್ ತಿಂಗಳ ಒಳಗಾಗಿಯೇ, ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿದೆ. ಇದನ್ನು ವಾಪಸ್ ಕೊಡಿಸಿ ಎಂದು ಹಲವಾರು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಪರೀಕ್ಷೆ ರದ್ದಾಗಿದ್ದರೂ ಕೂಡ ಮೌಲ್ಯ ಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.

ಈ ಸಂಬಂಧ ಎಲ್ಲ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಕಳುಹಿಸುವಂತೆ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಸಚಿವರು ಸೂಚಿಸಿದ್ದಾರೆ

LEAVE A REPLY

Please enter your comment!
Please enter your name here