ಸೆ.21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರ ಆರಂಭ ?

0
189
Tap to know MORE!

ಲಾಕ್‌ಡೌನ್ ಜಾರಿಯಾದ ದಿನದಿಂದ ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಆರು ತಿಂಗಳ ಬಳಿಕ ಅಂತರರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ಕಾಸರಗೋಡು- ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ. ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಹೊರಟದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆಎಸ್ಸಾರ್ಟಿಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here