ಸೋಂಕು ತಡೆಯಲು ಲಾಕ್ಡೌನ್ ಒಂದೇ ಪರಿಹಾರವಲ್ಲ : ಯಡಿಯೂರಪ್ಪ

0
196
Tap to know MORE!

ರಾಜ್ಯಾದ್ಯಂತ ದಿನೇ ದಿನೇ ಕೊರೋನವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅದನ್ನು ತಡೆಯುವ ಸಲುವಾಗಿ ಕೆಲವು ಜಿಲ್ಲೆಗಳಿಂದ ಮತ್ತೊಂದು ಅವಧಿಯ ಲಾಕ್ಡೌನ್ ಜಾರಿಗೊಳಿಸಲು ವಿವಿಧ ಸಂಘಟನೆಗಳಿಂದ ಮತ್ತು ಕೆಲವು ರಾಜಕೀಯ ಪಕ್ಷಗಳಿಂದ ಒತ್ತಡ ಹೆಚ್ಚುತ್ತಿರುವ ಮಧ್ಯೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಲಾಕ್ ಡೌನ್ ಮಾಡುವ ಕಲ್ಪನೆಯನ್ನು ವೈಯಕ್ತಿಕವಾಗಿ ವಿರೋಧಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದರು.

ಜುಲೈ 13 ರ ಸೋಮವಾರ ಅವರು ವಿವಿಧ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಸಹಕಾರಕ್ಕಾಗಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕೊರೋನವೈರಸ್‌ಗೆ ಸಂಬಂಧಿಸಿದ ಎಲ್ಲಾ ತೊಂದರೆಗಳು ಮತ್ತು ಕಳವಳಗಳನ್ನು ಲಾಕ್‌ಡೌನ್ ಪರಿಹರಿಸುತ್ತದೆ ಎಂಬುದು ಒಂದು ತಪ್ಪು ಕಲ್ಪನೆ ಎಂದು ಮುಖ್ಯಮಂತ್ರಿ ಹೇಳಿದರು.

ದಕ್ಷಿಣ ಕನ್ನಡದ ವರದಿ ಪಡೆದ ಮುಖ್ಯಮಂತ್ರಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿ ಕುರಿತು ಅವರು ವರದಿ ಪಡೆದರು. ಮೇಲಿನ ಅಭಿಪ್ರಾಯವನ್ನೇ ಜಿಲ್ಲೆಯ ಅಧಿಕಾರಿಗಳ ಮುಂದಿಟ್ಟರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here