ಪಕ್ಷಿಕೆರೆ : “ಸ್ವಚ್ಛೋತ್ಸವ – ನಿತ್ಯೋತ್ಸವ” ಮಾಸಾಚರಣೆಗೆ ಚಾಲನೆ

0
179
Tap to know MORE!

ಶ್ರೀ ವಿನಾಯಕ ಮಿತ್ರ ಮಂಡಳಿ (ರಿ.) ಪಕ್ಷಿಕೆರೆ ಇದರ ನೇತೃತ್ವದಲ್ಲಿ, “ಸ್ವಚ್ಛೋತ್ಸವ-ನಿತ್ಯೋತ್ಸವ” ಮಾಸಾಚರಣೆ ಕಾರ್ಯಕ್ರಮ ಅನುಷ್ಠಾನಗೊಳಿಸುವ ಅಂಗವಾಗಿ ಅಕ್ಟೋಬರ್ 11 ರಂದು ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಪೇಟೆಯಿಂದ ಸೈಂಟ್ ಜೂಡ್ ಶಾಲೆಯವರೆಗೆ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,  ಮಂಗಳೂರು ತಾಲೂಕು ಪಂಚಾಯತ್, ಕೆಮ್ರಾಲ್ ಗ್ರಾಮ ಪಂಚಾಯತ್,  ಸ್ವಚ್ಛ ಭಾರತ್ ಮಿಷನ್(ಗ್ರಾ) ಇದರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 2 ರಿಂದ 31ರವರೆಗೆ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯದಲ್ಲಿ ಮಾಜಿ ಪಂ.ಅಧ್ಯಕ್ಷರಾದ ಶ್ರೀ ನಾಗೇಶ್ ಬೊಳ್ಳೂರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಅರುಣ್ ಪ್ರದೀಪ್ ಡಿಸೋಜಾ, ಕಾರ್ಯದರ್ಶಿ ಶ್ರೀ ಕೇಶವ್, ಸಾಮಾಜಿಕ ಸೇವಾಕರ್ತರಾದ ಶ್ರೀ ನಿತಿನ್ ವಾಸ್, ಮಂಡಳಿಯ ಗೌರವಾಧ್ಯಕ್ಷರಾದ ಶ್ರೀ ಧನಂಜಯ ಪಿ ಶೆಟ್ಟಿಗಾರ್, ಅಧ್ಯಕ್ಷರಾದ ಶ್ರೀ ಯಜ್ಞೇಶ್.ಪಿ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿಯಾದ ಶ್ರೀ ಧನರಾಜ್ ಅಂಚನ್ ಹಾಗೂ ಸದಸ್ಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here