ಬೆಂಗಳೂರು: ಕುಡಿತದ ಅಮಲಿನಲ್ಲಿ ಪೋಲೀಸರ ಮೇಲೆ ಹಲ್ಲೆ | ಎಂಎಲ್‌ಸಿ ನಾಸಿರ್ ಅಹಮದ್ ಪುತ್ರನ ಬಂಧನ!

0
170
Tap to know MORE!

ಬೆಂಗಳೂರು: ಹೆಬ್ಬಾಳದಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರೊಬ್ಬರ ಪುತ್ರ ಮತ್ತು ಆತನ ಸ್ನೇಹಿತರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ

ಬೆಂಗಳೂರಿನ ಹೆಬ್ಬಾಳದ ಬಿಎಂಟಿಸಿ ಡಿಪೋ ಬಳಿ ಎಂಎಲ್ಸಿ ಪುತ್ರ ಮತ್ತು ಆತನ ಸ್ನೇಹಿತರು ಅಮೃತಹಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬುದ್ಧಿವಾದ ಹೇಳಿದ್ದಕ್ಕೆ ತಹಶೀಲ್ದಾರ್ ಮೇಲೆಯೇ ಹಲ್ಲೆ!

ಮದ್ಯ ಸೇವನೆ ಮಾಡಿ ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಮೂವರನ್ನು ಅಮೃತಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here