ಹಳೆಯಂಗಡಿ: ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಕಾರ್ಯಕ್ರಮ

0
340
Tap to know MORE!

ಹಳೆಯಂಗಡಿ : ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು, ಕೆಮ್ರಾಲ್‌ ಇವರ ಸಹಕಾರದಲ್ಲಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಸಹಭಾಗಿತ್ವದಲ್ಲಿ ಯುವಕ ಮಂಡಲದ ಸಭಾಂಗಣದಲ್ಲಿ ಎರಡನೇ ಡೋಸ್ ಲಸಿಕೆ ನೀಡುವ ಕಾರ್ಯಕ್ರಮ ಜರುಗಿತು.

ಕೋವಿಡ್ ಲಸಿಕೆ ಪಡೆದವರು ಡೆಲ್ಟಾ ರೂಪಾಂತರದಿಂದ ಹೆಚ್ಚಿನ ರಕ್ಷಣೆಯನ್ನು ಪಡೆಯುತ್ತಾರೆ: ಐಸಿಎಂಆರ್

ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾರವರು ದೀಪ ಬೆಳಗಿಸಿ ಚಾಲನೆ ನೀಡಿದರು.

ನಿಮ್ಮ ಊರಿನ, ಸ್ಥಳೀಯ ಸುದ್ದಿಗಳನ್ನು ಸುದ್ದಿವಾಣಿಯಲ್ಲಿ ಪ್ರಕಟಿಸಲಾಗುವುದು. ಆದ ಜನ ಸ್ನೇಹಿ ಕಾರ್ಯಕ್ರಮಗಳ ವರದಿಯನ್ನು suddivani20@gmail.com ಗೆ mail ಮಾಡಿ

ಈ ಸಂದರ್ಭ ವೇದಿಕೆಯಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಜೀವನ್ ಪ್ರಕಾಶ್ ಕಾಮೇರೆಟ್ಟು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ನಾಗರಾಜ್ ಪೂಜಾರಿ, ಶ್ರೀಮತಿ ಜಯಂತಿ, ಕಿರಿಯ ಆರೋಗ್ಯ ಸಹಾಯಕರಾದ ಶ್ರೀಮತಿ ಅನಿತಾ, ಶ್ರೀಮತಿ ಸುಧಾ, ಶ್ರೀಮತಿ ಮಂಜುಳಾ, ಸಹಾಯಕರಾದ ಶ್ರೀ ಮಾಧವ, ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಇದರ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ ಇದರ ಕಾರ್ಯಧ್ಯಕ್ಷರಾದ ಶ್ರೀ ಸುಧಾಕರ ಆರ್ ಅಮೀನ್, ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಸದಾಶಿವ ಅಂಚನ್ ಚಿಲಿಂಬಿ, ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ದಿವ್ಯಶ್ರೀ ರಮೇಶ್ ಕೋಟ್ಯಾನ್, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಅಶ್ರಫ್, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಶಿಕ್ಷಕರು ಉಪಸ್ಥಿತರಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕಾರ್ಯಕ್ರಮದ ಯಶಸ್ಸಿಗೆ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಸದಸ್ಯರುಗಳು ಸರ್ವ ರೀತಿಯ ಸಹಕಾರ ನೀಡಿದರು. 224 ಜನರಿಗೆ ಈ ಸಂದರ್ಭದಲ್ಲಿ ಎರಡನೇ ಡೋಸ್ ಲಸಿಕೆ ನೀಡಲಾಯಿತು.

LEAVE A REPLY

Please enter your comment!
Please enter your name here