ಹೆಚ್ಚುತ್ತಿರುವ ನೀರಿನ ಬೇಡಿಕೆ ಪೂರೈಸಲು ಮಳೆ ನೀರು ಕೊಯ್ಲು ಉತ್ತಮ ಯೋಜನೆ: ಶಾಸಕ ಉಮಾನಾಥ ಕೋಟ್ಯಾನ್

0
439
Tap to know MORE!

ಹಳೆಯಂಗಡಿ:- “ಕುಡಿಯುವ ನೀರು ಪ್ರತಿಯೊಂದು ಜೀವಕ್ಕೂ ಆಧಾರ. ಯಾವುದೇ ನಾಡಿನ ಸುಸ್ಥಿರತೆಯು ಆ ನೆಲದ ನೀರಿನ ಮೂಲಗಳ ಸಮರ್ಪಕ ನಿರ್ವಹಣೆಯ ಮೇಲೆ ಅವಲಂಬಿತವಾಗಿರುತ್ತದೆ. ಬೆಳೆಯುತ್ತಿರುವ ಜನಸಂಖ್ಯೆಯ ಜೊತೆಜೊತೆಗೆ ನೀರಿನ ಅವಶ್ಯಕತೆಯೂ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಮಳೆ ನೀರು ಕೊಯ್ಲು ಅಭಿಯಾನ ಒಂದು ಒಳ್ಳೆಯ ಯೋಜನೆ” ಎಂದು ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅಭಿಪ್ರಾಯಪಟ್ಟರು.

ಹಳೆಯಂಗಡಿಯ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ “ಮಳೆ ನೀರು ಕೊಯ್ಲು ಅಭಿಯಾನ”ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹವಾಮಾನ ಬದಲಾವಣೆ ಹಾಗೂ ಮಳೆಯ ಮಾದರಿಗಳಲ್ಲಿನ ಬದಲಾವಣೆಗಳಿಂದ ಒಣ ಋತುವಿನಲ್ಲಿ ಅಥವಾ ಬರಗಾಲದಲ್ಲಿ ತೀವ್ರ ಬರವನ್ನೆದುರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಇಂದಿನ ನೀರಿನ ಕೊರತೆಗೆ ಮೇಲ್ಮೈ ನೀರು ಹಾಗೂ ಅಂತರ್ಜಲದ ಬತ್ತುವಿಕೆಯೂ ಕಾರಣವಾಗಿದೆ. ಹರಿದು ಹೋಗುವ ನೀರನ್ನು ತಡೆಗಟ್ಟಿ ಭೂಮಿಯಲ್ಲಿ ಇಂಗುವಂತೆ ಮಾಡುವುದು. ಅಂತರ್ಜಲವನ್ನು ಹೆಚ್ಚಿಸುವುದು. ಇದು ಪರಿಸರಸ್ನೇಹಿ ಸರಳ ತಂತ್ರಜ್ಞಾನವಾಗೀದ್ದು, ಕಡಿಮೆ ಖರ್ಚಿನಲ್ಲಿ ನಿರ್ವಹಿಸಬಹುದು” ಎಂದರು.

ನಿಮ್ಮ ಊರಿನ, ಸ್ಥಳೀಯ ಸುದ್ದಿಗಳನ್ನು ಸುದ್ದಿವಾಣಿಯಲ್ಲಿ ಪ್ರಕಟಿಸಲಾಗುವುದು. ಆದ ಜನ ಸ್ನೇಹಿ ಕಾರ್ಯಕ್ರಮಗಳ ವರದಿಯನ್ನು suddivani20@gmail.com ಗೆ mail ಮಾಡಿ

ಈ ಅಭಿಯಾನದ ಪ್ರಥಮ ಯೋಜನೆಯನ್ನು ಇನ್ನೊಬ್ಬರಿಗೆ ನಾವು ಮಾದರಿಯಾಗಿ ಈ ಕಾರ್ಯಗಾರ ಇನ್ನೂ ಕೂಡಾ ಹೆಚ್ಚು ಹೆಚ್ಚು ಮನೆ, ಕಚೇರಿಗಳಲ್ಲಿ ಅನುಷ್ಠಾನ ತರುವಂತಾಗಬೇಕು ಎನ್ನುವ ದೃಷ್ಟಿಯಿಂದ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಪಾವಂಜೆ ಇವರ ಮುಂದಾಲೋಚನೆಯಲ್ಲಿ ಅವರ ಸಹೋದರ ಯುವಕ ಮಂಡಲದ ಮಾಜಿ ಕಾರ್ಯದರ್ಶಿ ರವಿರಾಜ್ ಪಿ. ರಾಮನಗರ ಇವರ ಸಂಪೂರ್ಣ ಸಹಕಾರದಲ್ಲಿ ಅವರ ಮನೆಯಲ್ಲಿ ನೂತನವಾಗಿ ಅಳವಡಿಕೆ ಮಾಡಿರುವ “ಮಳೆ ನೀರು ಕೊಯ್ಲು ವ್ಯವಸ್ಥೆಯ ಅಳವಡಿಕೆಗೆ ಚಾಲನೆ ನೀಡಲಾಯಿತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಸಂದರ್ಭದಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ವಿನೋದ್ ಕುಮಾರ್ ಬೋಳ್ಳುರು, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಜೀವನ್ ಪ್ರಕಾಶ್ ಕಾಮೇರೊಟ್ಟು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಕುಮಾರ್ ಕೊಳುವೈಲು, ಶ್ರೀ ಸುಕೇಶ್ ಪಾವಂಜೆ, ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಇದರ ಕಾರ್ಯಧ್ಯಕ್ಷರಾದ ಶ್ರೀ ಸುಧಾಕರ ಆರ್ ಅಮೀನ್, ಪ್ರದಾನ ಕಾರ್ಯದರ್ಶಿ ಶ್ರೀ ರಾಮದಾಸ್ ಪಾವಂಜೆ, ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ದಿವ್ಯಶ್ರೀ ರಮೇಶ್ ಕೋಟ್ಯಾನ್, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಅಶ್ರಫ್, ಪ್ರದಾನ ಕಾರ್ಯದರ್ಶಿ ಶ್ರೀಮತಿ ಪ್ರೇಮಾ ಯೋಗೀಶ್, ಕೋಶಾಧಿಕಾರಿ ರಾಜೇಶ್ವರಿ ರಾಮನಗರ ಹಾಗೂ ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಹೆಚ್ಚಿನ ಹಿರಿಯ ಕಿರಿಯ ಸದಸ್ಯರು, ಹಾಗೂ ಶ್ರೀ ರಾಮದಾಸ್ ಪಾವಂಜೆ ಇವರ ಕುಟುಂಬವರ್ಗದವರು ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷರಾದ ಯತೀಶ್ ಕೋಟ್ಯಾನ್ ಸ್ವಾಗತಿಸಿ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯ ಅಧ್ಯಕ್ಷರಾದ ಸುಧಾಕರ ಆರ್ ಅಮೀನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ್ ಪಾವಂಜೆ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here