ಹಳೆಯಂಗಡಿಯಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ

0
179
Tap to know MORE!

ಹಳೆಯಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು, ಕೆಮ್ರಾಲ್ ಇದರ ಸಹಕಾರದಲ್ಲಿ ಕರ್ನಾಟಕ ರಾಜ್ಯಪ್ರಶಸ್ತಿ ಪುರಸ್ಕೃತ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ(ರಿ) ಹಳೆಯಂಗಡಿ ಇದರ ಸಹಭಾಗಿತ್ವದಲ್ಲಿ ಉಚಿತ ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮವು ಗ್ರಾಮ ಪಂಚಾಯತ್ ಬಳಿಯ ಶ್ರೀ ಜಾರಂದಾಯ ದೈವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.

ಇದಕ್ಕೆ ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್ (ರಿ) ಸುವರ್ಣ ಮಹೋತ್ಸವ ಸಮಿತಿ, ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ), ಜಿಲ್ಲಾ ಪ್ರಶಸ್ತಿ ವಿಜೇತ ಯುವತಿ ಮತ್ತು ಮಹಿಳಾ ಮಂಡಲ (ರಿ), ಹಳೆಯಂಗಡಿ ಇವರ ಸಹಕಾರ ನೀಡಿತು.

ಹಳೆಯಂಗಡಿಯಲ್ಲಿ ಸಸಿ ನೆಡುವ – ವಿತರಿಸುವ ಪರಿಸರ ಜಾಗೃತಿ ಕಾರ್ಯಕ್ರಮ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕಾರ್ಯಕ್ರಮಕ್ಕ್ಕೆ ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಇವರು ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರಮೇಶ್ ನಾಯಕ್ ಇವರು ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀ ಅಶೋಕ್ ಬಂಗೇರ, ಕಾರ್ಯದರ್ಶಿ ಶ್ರೀ ಶೈಲ, ಪ್ರಾಥಮಿಕ ಆರೋಗ್ಯ ಕೇಂದ್ರ ಕೇಮ್ರಲ್ ಇದರ ಆರೋಗ್ಯಾಧಿಕಾರಿ ಶ್ರೀಮತಿ ಚಿತ್ರ, ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಅಶ್ರಫ್ ಹಾಗೂ ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಹೆಚ್ಚಿನ ಸದಸ್ಯರು, ಸಿಬ್ಬಂದಿ ವರ್ಗ, ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕರು, ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಸದಸ್ಯರು, ಅಂಗನವಾಡಿ ಸಹಾಯಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ಸುಮಾರು 521ಕ್ಕೂ ಹೆಚ್ಚಿನ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಲಸಿಕೆಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here