ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ಕೌಶಲ್ಯ ಕಾರ್ಯಾಗಾರ

0
203
Tap to know MORE!

ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ಹಳೆಯಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ವಿದ್ಯಾರ್ಥಿಗಳಿಗೆ ಒಂದು ದಿನದ ಪತ್ರಿಕೋದ್ಯಮ ಕೌಶಲ್ಯಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಕೆ. ಮಾತನಾಡಿ, `ಪತ್ರಿಕೋದ್ಯಮವು ಶಾಸ್ತ್ರೀಯ ಅಧ್ಯಯನವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೋದ್ಯಮವನ್ನು ನಾಲ್ಕನೆಯ ಅಂಗವಾಗಿ ಪರಿಗಣಿಸಲಾದ್ದರಿಂದ ಸಮಾಜದ ನೈತಿಕ ಜವಾಬ್ದಾರಿಯನ್ನು ಹೊಂದಿದೆ. ಸಾಮಾನ್ಯರಿಗೆ ರಕ್ಷಣೆ ನೀಡುವ ಮಾಧ್ಯಮದ ಕೌಶಲ್ಯಗಳ ಕಲಿಕೆಯು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗುತ್ತದೆ’ ಎಂದರು.

ಕಾರ್ಯಾಗಾರದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, `ಪತ್ರಿಕೋದ್ಯಮದಲ್ಲಿ ಬರವಣಿಗೆಗೆ ವಿಪುಲ ಅವಕಾಶಗಳಿವೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಜ್ಞಾನಾಭಿವೃದ್ಧಿಗೆ ಬಳಸಿಕೊಳ್ಳಬೇಕು. ಮಾಧ್ಯಮಗಳಲ್ಲಿ ಹೊಸ ಅನ್ವೇಷಣೆಗಳಿಗೆ ತೆರೆದುಕೊಳ್ಳುವ ಅವಕಾಶವಿದೆ’ ಎಂದರು.

ಪತ್ರಿಕೋದ್ಯಮ ಉಪನ್ಯಾಸಕರಾದ ಡಾ. ಶ್ರೀನಿವಾಸ ಹೊಡೆಯಾಲ, ಡಾ. ಸಫಿಯಾ, ಶ್ರೀಗೌರಿ ಜೋಶಿ, ಅಕ್ಷಯ್ ರೈ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಆಳ್ವಾಸ್‌ನ ಪತ್ರಿಕೋದ್ಯಮ ವಿದ್ಯಾರ್ಥಿಗಳಾದ ಇಂದುಧರ್, ವೆನಿಷಾ ಹಾಗೂ ದುರ್ಗಾಪ್ರಸನ್ನ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here