ಹಾಲಾಡಿ ಸೇತುವೆಗೆ ಕಾರು ಡಿಕ್ಕಿ | ಕೆಎಂಎಫ್ ನಿರ್ದೇಶಕ ಸಾವು!

0
117
Tap to know MORE!

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಹದ್ದೂರು ರಾಜೀವ್ ಶೆಟ್ಟಿ(60) ಇಂದು ಮಧ್ಯಾಹ್ನ ಹಾಲಾಡಿ ಸೇತುವೆಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಹಾಲಾಡಿಯಲ್ಲಿ ಕಾರ್ಯಕ್ರಮ ಮುಗಿಸಿ ಶಂಕರನಾರಾಯಣಕ್ಕೆ ಬರುತ್ತಿರುವ ಸಂದರ್ಭ ಹಾಲಾಡಿಯ ಸೇತುವೆಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಂಭೀರ ಗಾಯಗೊಂಡ ರಾಜೀವ ಶೆಟ್ಟಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

35 ವರ್ಷಗಳಿಂದ ಹೈನುಗಾರಿಕೆ,ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹದ್ದೂರು ರಾಜೀವ ಶೆಟ್ಟಿ ಅವರಿಗೆ ಕುಂದಾಪುರ ತಾಲೂಕು ಉತ್ತಮ ಕೃಷಿಕ ಪ್ರಶಸ್ತಿ, ಸಬ್ಲಾಡಿ ಸೀನಪ್ಪ ಶೆಟ್ಟಿ ಕೃಷಿ ಸಾಧಕ ಪ್ರಶಸ್ತಿಗಳು ಲಭಿಸಿವೆ.

ರಾಜೀವ ಶೆಟ್ಟಿ ಅವರು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾಗಿದ್ದು, ಬೈಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

LEAVE A REPLY

Please enter your comment!
Please enter your name here