ಪಾಕ್ ಸೇನೆಯ ಗುಂಡಿನ ದಾಳಿಗೆ ಸೇನಾಧಿಕಾರಿ ಹುತಾತ್ಮ

0
201
Tap to know MORE!

ಜಮ್ಮು: ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಕೆಲವು ವ್ಯಕ್ತಿಗಳ ಶಂಕಾಸ್ಪದ ಚಲನವಲನವನ್ನು ಗಮನಿಸಿದ ಭಾರತೀಯ ಸೇನೆ ಮುಂಚೂಣಿ ನೆಲೆಗೆ ಎಚ್ಚರಿಕೆ ಸಂದೇಶ ಕಳುಹಿಸಿ ಗಸ್ತು ಪ್ರಕ್ರಿಯೆಯನ್ನು ತೀವ್ರಗೊಳಿಸಿತು. ಆಗ ಪಾಕಿಸ್ತಾನದ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ಆರಂಭಿಸಿದ್ದು ಭಾರತೀಯ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ.

ಭಾರತದ ಸೇನೆಯೂ ಸೂಕ್ತ ಪ್ರತ್ಯುತ್ತರ ನೀಡಿದ್ದು, ಪಾಕ್ ಕಡೆಯಲ್ಲೂ ಸಾವು ನೋವುಗಳಾಗಿವೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ಹೇಳಿದ್ದಾರೆ. ಗಡಿ ಭಾಗದಲ್ಲಿ ಭಾರತದೊಳಗೆ ನುಸುಳುವ ಉಗ್ರರಿಗೆ ರಕ್ಷಣೆ ನೀಡಲು ಸಾಮಾನ್ಯವಾಗಿ ಪಾಕಿಸ್ತಾನಿ ಪಡೆ ಈ ರೀತಿಯ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಂಡಿನ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಸೇನೆಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ) ರಜ್ವೀಂದರ್ ಸಿಂಗ್ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು . ಅವರ ಮೃತದೇಹದ ಅಂತ್ಯಸಂಸ್ಕಾರ ಹುಟ್ಟೂರು ಅಮೃತಸರದಲ್ಲಿ ಇಂದು ನಡೆಯಲಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here