ಭಾರತದ ನೋವಿಗೆ ನನ್ನ ಹೃದಯ ಮಿಡಿಯುತ್ತಿದೆ: ಕ್ರಿಕೆಟಿಗ ಮ್ಯಾಥ್ಯೂ ಹೇಡನ್

0
140
Tap to know MORE!

ದೆಹಲಿ: ಭಾರತವು ಅನುಭವಿಸುತ್ತಿರುವ ಕೋವಿಡ್ ಕಷ್ಟಕಾಲದಲ್ಲಿ ಆಸ್ಚ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ತಮ್ಮ ಬ್ಲಾಗ್‌ನಲ್ಲಿ ಭಾರತದ ಬಗ್ಗೆ ಭಾವುಕವಾಗಿ ಬರೆದಿದ್ದಾರೆ.

“ಹಿಂದೆಂದೂ ನೋಡಿರದಂತೆ ಭಾರತವು ಸಾಂಕ್ರಾಮಿಕ ಎರಡನೇ ಅಲೆಯ ಹೊಡೆತದ ಮಧ್ಯದಲ್ಲಿದೆ. 1400 ಕೋಟಿ ಜನರಿರುವ ಈ ದೇಶ ವೈರಸ್ ಸೋಂಕು ವಿರುದ್ಧ ಹೋರಾಡುತ್ತಿರುವಾಗ, ವಿಶ್ವ ಮಾಧ್ಯಮಗಳು ಭಾರತದ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಿಲ್ಲ. ಅಲ್ಲಿ ಯಾವುದೇ ಸಾರ್ವಜನಿಕ ಯೋಜನೆಯ ಅನುಷ್ಠಾನ ಮತ್ತು ಅದರ ಯಶಸ್ಸು ದೊಡ್ಡ ಸವಾಲಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಾನು ಒಂದು ದಶಕದಿಂದ ಭಾರತಕ್ಕೆ ಭೇಟಿ ನೀಡುತ್ತಿದ್ದೇನೆ ಮತ್ತು ದೇಶಾದ್ಯಂತ ಪ್ರವಾಸ ಮಾಡಿದ್ದೇನೆ. ವಿಶೇಷವಾಗಿ ತಮಿಳುನಾಡು ನನ್ನ ಆಧ್ಯಾತ್ಮಿಕ ನೆಲೆ ಎಂದು ನಾನು ಪರಿಗಣಿಸುತ್ತೇನೆ. ಅಂತಹ ವೈವಿಧ್ಯಮಯ ಮತ್ತು ವಿಶಾಲವಾದ ದೇಶವನ್ನು ನಡೆಸುವ ಕಾರ್ಯವನ್ನು ವಹಿಸಿಕೊಂಡಿರುವ ನಾಯಕರು ಮತ್ತು ಸಾರ್ವಜನಿಕ ಅಧಿಕಾರಿಗಳ ಬಗ್ಗೆ ನನಗೆ ಯಾವಾಗಲೂ ಹೆಚ್ಚಿನ ಗೌರವವಿದೆ” ಎಂದು ಬರೆದಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

“ನಾನು ಹೋದಲ್ಲೆಲ್ಲಾ ಜನರು ನನ್ನನ್ನು ಪ್ರೀತಿಯಿಂದ ಮತ್ತು ವಾತ್ಸಲ್ಯದಿದ ಸ್ವಾಗತಿಸಿದರು, ಅದಕ್ಕಾಗಿ ನಾನು ಅವರಿಗೆ ಆಭಾರಿ. ನಾನು ಹಲವಾರು ವರ್ಷಗಳಿಂದ ಭಾರತನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಆದ್ದರಿಂದಲೇ ಈ ಕ್ಷಣದಲ್ಲಿ ನೋವಿಗೆ ನನ್ನ ಹೃದಯ ಮಿಡಿಯುತ್ತಿದೆ. ಈ ಹೊತ್ತಲ್ಲಿ ಕೆಟ್ಟ ಮಾಧ್ಯಮಗಳು ಸಹ ಭಾರತದ ಜನರ ಮತ್ತು ಅವರ ಅಸಂಖ್ಯಾತ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿಲ್ಲ” ಎಂದು ಹೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here