ಹೈಕಮಾಂಡ್‌ನಿಂದ ಸಂಜೆಯೊಳಗೆ ಸಂದೇಶ | ಸಿಎಂ ಯಾರಾಗುವರು ಎಂಬುದು ನನ್ನ ಕೈಯಲ್ಲಿಲ್ಲ: ಸಿಎಂ ಯಡಿಯೂರಪ್ಪ

0
512
Tap to know MORE!

ಬೆಳಗಾವಿ: ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಬಹುದು, ಸಂದೇಶ ಬಂದ ಕೂಡಲೇ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (Yediyurappa) ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹೆಚ್ಚು ಹಾನಿಯಾಗಿದೆ, ಎಲ್ಲೆಲ್ಲಿ ಏನೇನು ಆಗಿದೆ, ಆಸ್ತಿಪಾಸ್ತಿ, ಜನರಿಗೆ ಆಗಿರುವ ಸಂಕಷ್ಟ, ನಷ್ಟ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದೇನೆ, ನನ್ನ ಜೊತೆ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ಇದ್ದಾರೆ ಎಂದು ಹೇಳಿದರು.

ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗೆ ಯಾರೂ ಮುಂದಾಗಬೇಡಿ: ಸಿಎಂ ಯಡಿಯೂರಪ್ಪ ಮನವಿ

ಇಂದು ಬೆಳಗಾವಿಯ ಹಾನಿಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮೊದಲು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಿಂದ ಸಂದೇಶ ಬಂದ ಮೇಲೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು, ಎರಡು ವರ್ಷಗಳ ಆಡಳಿತ ತೃಪ್ತಿ ನೀಡಿದೆಯೇ ಎಂದು ಸುದ್ದಿಗಾರರು ಕೇಳಿದಾಗ ಜನರಿಗೆ ನನ್ನ ಆಡಳಿತ ತೃಪ್ತಿ ನೀಡಿದರೆ ಆಯಿತು ಎಂದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ದಲಿತರು ಸಿಎಂ ಆಗಲಿದ್ದಾರೆಯೇ ಎಂದು ಕೇಳಿದ್ದಕ್ಕೆ ಮುಂದಿನ ಸಿಎಂ ಯಾರಾಗಬೇಕೆಂದು ನಿರ್ಧಾರ ಮಾಡುವುದು ನಾನಲ್ಲ, ಹೈಕಮಾಂಡ್. ಸ್ವಾಮೀಜಿಗಳು ಕೂಡ ಸಮಾವೇಶ ಮಾಡುವ ಅಗತ್ಯವಿಲ್ಲ ಎಂದರು. ಪ್ರಧಾನಿ ಮೋದಿ, ಅಮಿತ್ ಶಾ, ರಾಷ್ಟ್ರಾಧ್ಯಕ್ಷ ನಡ್ಡಾ ಅವರ ಮೇಲೆ ನನಗೆ ನಂಬಿಕೆಯಿದೆ ಎಂದರು.

ಇಂದು ಬೆಳಗಾವಿ ಜಿಲ್ಲೆಯಲ್ಲಿ ನೆರ ಹಾನಿಗೀಡಾದ ಪ್ರದೇಶಗಳಾದ ಹುಕ್ಕೇರಿ, ನಿಪ್ಪಾಣಿ ಮೊದಲಾದ ತಾಲ್ಲೂಕುಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

LEAVE A REPLY

Please enter your comment!
Please enter your name here