ಬಂದ್ ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ : ಹೈಕೋರ್ಟ್

0
170
Tap to know MORE!

ಬೆಂಗಳೂರು: ರಾಜ್ಯದಲ್ಲಿ ಮರಾಠ ನಿಗಮ ರಚನೆ ನಿರ್ಧಾರ ವಿರೋಧಿಸಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ರಾಜ್ಯದಾದ್ಯಂತ ಬಂದ್ ಗೆ ಕರೆ ನೀಡಿವೆ.

ಈ ಬಂದ್ ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಲಿದ್ದಾರೆ ಎಂದು ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಬಂದ್ ಆಚರಿಸುವವರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಉಲ್ಲಂಘಿಸಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಬಂದ್| ಬೆಂಬಲ ಕೊಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

ಲೆಟ್ಸ್ ಕಿಡ್ ಫೌಂಡೇಷನ್ ಹಾಗೂ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯ-ಮೂರ್ತಿ ಎ.ಎಸ್. ಓಕ್ ನೇತೃತ್ವದ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಶನಿವಾರ ನಡೆಯಲಿರುವ ಪ್ರತಿಭಟನೆ ವಿಷಯವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದಾಗ ಪೀಠ, ”ಈ ಬಂದ್ನಿಂದಾಗುವ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ. ವ್ಯಾಪಾರಿಗಳಿಗೆ ಆಗುವ ನಷ್ಟಕ್ಕೂ ಆಯೋಜಕರೇ ಹೊಣೆ ಹೊರಬೇಕಾಗುತ್ತದೆ,”ಎಂದು ಹೇಳಿದೆ.

LEAVE A REPLY

Please enter your comment!
Please enter your name here