ತೋಕೂರಿನಲ್ಲಿ “ಶಾಂತಿಗಾಗಿ ಯುವ ಜನರು” ಕಾರ್ಯಾಗಾರ

0
166
Tap to know MORE!

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು ಇದರ ಆಶ್ರಯದಲ್ಲಿ ಜನವರಿ 17, 2021 ರಂದು ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಶಾಂತಿಗಾಗಿ ಯುವ ಜನರು ಕಾರ್ಯಾಗಾರವು ಸ್ಪೋರ್ಟ್ಸ್ ಕ್ಲಬ್ ನ ಸಭಾಂಗಣದಲ್ಲಿ ಜರುಗಿತು.

ಅತಿಥಿ ಗಣ್ಯರು ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ಅನಾವರಣಗೊಳಿಸಿ, ದೀಪ ಬೆಳಗಿಸುವುದರ ಮೂಲಕ ಹಾಗೂ ಪುಷ್ಪ ನಮನದೊಂದಿಗೆ ಕಾರ್ಯಕ್ರಮವನ್ನು ಉಧ್ಘಾಟಿಸಿದರು.

ಇದನ್ನೂ ಓದಿ: ತೋಕೂರು: ಯೆನೆಪೋಯ ವಿವಿ ವತಿಯಿಂದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ನೆಹರು ಯುವಕೇಂದ್ರದ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್ ಪೇಟೆ, ಮೇರು ವ್ಯಕ್ತಿತ್ವದ ಸ್ವಾಮಿ ವಿವೇಕಾನಂದರು ಯುವಜನತೆಗೆ ಯಾವ ರೀತಿ ಆದರ್ಶಪ್ರಾಯರಾಗಿದ್ದರು ಎಂಬುದರ ಬಗ್ಗೆ ತಿಳಿ ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ವಿವಿ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ| ಯತೀಶ್ ಕುಮಾರ್, ಸ್ವಾಮಿ ವಿವೇಕಾನಂದರ ಜೀವನದ ಮೌಲ್ಯಗಳನ್ನು, ಆದರ್ಶಗಳನ್ನು ಯುವ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅವರ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳುವುದರ ಜೊತೆಗೆ ದೇಶದ ಸರ್ವತೋಮುಖ ಬೆಳವಣಿಗೆ ಸಾದ್ಯ ಎಂದು ಹೇಳಿದರು.

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರುವ ಲೋಕಯ್ಯ ಸಾಲ್ಯಾನ್ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯುವಜನತೆಗೆ ಯಾವ ರೀತಿ ಜೀವನ-ಶೈಲಿಯನ್ನು ರೂಢಿಸಿಕೊಳ್ಳಬಹುದೆಂದು ಉತ್ತಮ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷರಾದ ನಾರಾಯಣ ಜಿ. ಕೆ., ಅಧ್ಯಕ್ಷರಾದ ಸಂತೋಷ್ ದೇವಾಡಿಗ ಹಾಗೂ ಮಹಿಳಾ ಕಾರ್ಯಕಾರಿ ಸಮಿತಿ ಕಾರ್ಯಾಧ್ಯಕ್ಷೆ ವಾಣಿ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನ ತೋಕೂರು ಇದರ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಯೋಗೀಶ್ ಕೋಟ್ಯಾನ್, ಸಂಸ್ಥೆಯ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸದಸ್ಯೆಯರು, ಊರಿನ ಗ್ರಾಮಸ್ಥರು ಭಾಗವಹಿಸಿದರು.

ಶ್ರೀಮತಿ ಪವಿತ್ರ, ಶ್ರೀಮತಿ ಸುಷ್ಮಾ ಹಾಗೂ ಶ್ರೀಮತಿ ಉಷಾ ಪ್ರಾರ್ಥಿಸಿದರು. ಸಂತೋಷ್ ದೇವಾಡಿಗ ಸ್ವಾಗತಿಸಿ, ಸಂಪತ್ ದೇವಾಡಿಗ ವಂದಿಸಿದರು. ಪ್ರಶಾಂತ್ ಕುಮಾರ್ ಬೇಕಲ್ ಕಾರ್ಯಕ್ರಮ ನಿರೂಪಿಸಿದರು.

ಪಾವಂಜೆ : ದೇವಾಡಿಗ ಸಮಾಜ ಸೇವಾ ಸಂಘದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

LEAVE A REPLY

Please enter your comment!
Please enter your name here