ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವ್ಯವಹಾರಗಳಲ್ಲಿ ಭಾಗವಹಿಸಲು ಎಲ್ಲರಿಗೂ ಸಮಾನ ಹಕ್ಕಿದೆ : ಲಕ್ಷ್ಮಣ್ ಪುನರೂರು

0
158
Tap to know MORE!

“ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಸಾರುವುದೇ ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರತಿಯೊಬ್ಬರೂ ಒಂದಿಲ್ಲೊಂದು ರೀತಿಯಲ್ಲಿ ತನ್ನ ದೇಶದ ಮತ್ತು ಸರಕಾರದ ವ್ಯವಹಾರಗಳಲ್ಲಿ ಭಾಗವಹಿಸಲು ಇಲ್ಲಿ ಅವಕಾಶವಿದೆ. ದೇಶದ ಆಗುಹೋಗುಗಳಲ್ಲಿ ಭಾಗವಹಿಸಲು ಹಕ್ಕುಗಳ ರೂಪದಲ್ಲಿ ಪ್ರಜೆಗಳಿಗೆ ಅವಕಾಶಗಳನ್ನು ಕಲ್ಪಿಸಲಾಗಿದೆ” ಎಂದು ಅಖಿಲ ಭಾರತ ವಿಮಾ ಪ್ರತಿನಿಧಿಗಳ ಸಂಘಟನೆ (LICAOI) ಮುಲ್ಕಿ ಘಟಕ ಇದರ ಅಧ್ಯಕ್ಷ ಲಕ್ಷ್ಮಣ್ ಪುನರೂರು ಹೇಳಿದರು.

ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ), ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ಮಂಗಳವಾರ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯ ಸಂದರ್ಭ ಅವರು ಮಾತನಾಡಿದರು.

ಪಿ.ಸಿ.ಎ. ಬ್ಯಾಂಕ್, ಹಳೆಯಂಗಡಿ ಇದರ ಉಪಾಧ್ಯಕ್ಷ ಶ್ಯಾಂ ಪಡುಪಣಂಬೂರು ಇವರಿಂದ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ, ಗೋಪಾಲಕೃಷ್ಣ ತೋಕೂರು, ಗುರಿಕಾರರು, ಕೋರ್ದಬ್ಬು ದೇವಸ್ಥಾನ, ತೋಕೂರು, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್, ಸಂತೋಷ್ ಕುಮಾರ್,ಸಂಸ್ಥೆಯ ಗೌರವಾಧ್ಯಕ್ಷ ಶ್ರೀ ನಾರಾಯಣ ಜಿ.ಕೆ, ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಕಾರಿ ಸಮಿತಿ ಕಾರ್ಯಾಧ್ಯಕ್ಷೆ ಶ್ರೀಮತಿ ವಾಣಿ ಮಹೇಶ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ಉಪಸ್ಥಿತರಿದ್ದರು.

ಮಹಿಳಾ ಸದಸ್ಯೆಯರಾದ ಶ್ರೀಮತಿ ಸುಜಾತ, ಶ್ರೀಮತಿ ದಿವ್ಯ ಮತ್ತು ಶ್ರೀಮತಿ ಶೋಭಾ ಪ್ರಾರ್ಥಿಸಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಶ್ರೀ ಜಗಧೀಶ್ ಕುಲಾಲ್ ವಂದಿಸಿದರು ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಪ್ರಶಾಂತ್ ಕುಮಾರ್ ಬೇಕಲ್, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವನ್ನು ರಾಷ್ಟ್ರಗೀತೆ ಹಾಡುವ ಮೂಲಕ ಮುಕ್ತಾಯಗೊಳಿಸಲಾಯಿತು ನಂತರ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here