ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಮೂಲಕ ಇದುವರೆಗೆ 1,000 ಕೋಟಿ ಸಂಗ್ರಹ!

0
157
Tap to know MORE!

ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕಾಗಿ ದೇವಾಲಯ ನಿರ್ಮಾಣ ನಿಧಿಯನ್ನು ಸಂಗ್ರಹಿಸಲು ದೇಶಾದ್ಯಂತ ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮನೆ-ಮನೆ ಸಂಪರ್ಕ ನಡೆಸುತ್ತಿದ್ದಾರೆ. ರಾಮ ಮಂದಿರದ ನಿರ್ಮಾಣಕ್ಕಾಗಿ ದೇಶದ ಮೂಲೆ ಮೂಲೆಗಳಲ್ಲಿ ಹಣ ಸಂಗ್ರಹಿಸುವ ಅಭಿಯಾನವು ಜಾರಿಯಲ್ಲಿದೆ. ಈ ಅಭಿಯಾನದ ಮೂಲಕ ಇದುವರೆಗೆ ಸುಮಾರು 1000 ಕೋಟಿ ರೂ. ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳಲ್ಲಿ ಒಬ್ಬರಾಗಿರುವ ಪೆಜಾವರ್ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಮಹಾರಾಜ್ ಅವರು ಮಾಹಿತಿಯನ್ನು ನೀಡಿದ್ದಾರೆ.

ಅಯೋಧ್ಯೆಯಲ್ಲಿ ಮಂದಿರವನ್ನು ನಿರ್ಮಿಸಿ, ಅದರಲ್ಲಿ ಶ್ರೀರಾಮನ ವಿಗ್ರಹವನ್ನು ಸ್ಥಾಪಿಸುವುದು ಟ್ರಸ್ಟ್‌ನ ಉದ್ದೇಶವಲ್ಲ. ಆದರೆ ಭವಿಷ್ಯದಲ್ಲಿ ರಾಮರಾಜ್ಯವನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಅವರು ಇದೇ ವೇಳೆ ಹೇಳಿದರು. ರಾಜ್ಯದ ಎಲ್ಲಾ ದೇವಾಲಯಗಳನ್ನು ಸಂರಕ್ಷಿಸಬೇಕು ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ರಾಮ ಮಂದಿರದ ಬದಲಿಗೆ ಹಿಂದೂ ರಾಷ್ಟ್ರಕ್ಕೆ ಅಡಿಪಾಯ ಹಾಕಿದ್ದಾರೆ : ಓವೈಸಿ

ರಾಮ ಮಂದಿರದ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅನ್ನು ಸ್ಥಾಪಿಸಿದೆ. ಈ ಟ್ರಸ್ಟ್ ವಿಶ್ವ ಹಿಂದೂ ಪರಿಷತ್ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಜನವರಿ 15 ರಿಂದ, ದೇಶಾದ್ಯಂತ ಹಣ ಸಂಗ್ರಹಿಸುವ ಅಭಿಯಾನವನ್ನು ಪ್ರಾರಂಭಿಸಿದ್ದು, ಈ ಮೂಲಕ ಟ್ರಸ್ಟ್ ಕೇವಲ ಒಂದು ತಿಂಗಳೊಳಗೆ 1000 ಕೋಟಿ ರೂ. ಸಂಗ್ರಹಿಸಿದೆ.

LEAVE A REPLY

Please enter your comment!
Please enter your name here