ಮಂಗಳೂರು : ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ಮೆಡಿಕಲ್ ಕಾಲೇಜಿನ 11 ಮಂದಿ ಬಂಧನ..!

0
123
Tap to know MORE!

ಮಂಗಳೂರು, ಫೆ.11: ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.

ಕಣಚೂರು ಮೆಡಿಕಲ್ ಕಾಲೇಜಿನ ಬಿಪಿಎಡ್ ವಿಭಾಗದಲ್ಲಿ ಐದು ಮಂದಿ ಕಿರಿಯ ವಿದ್ಯಾರ್ಥಿಗಳಿಗೆ ಅದೇ ವಿಭಾಗದ ಹಿರಿಯ ವಿದ್ಯಾರ್ಥಿಗಳು ರ್‍ಯಾಗಿಂಗ್ ನಡೆಸಿದ್ದರು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಗೆ ಫೆ.8ರಂದು ದೂರು ನೀಡಿತ್ತು.

ಇದನ್ನೂ ಓದಿ: ಮಂಗಳೂರು: ಲಷ್ಕರ್ ಪರ ಗೋಡೆ ಬರಹ | ಓರ್ವ ಆರೋಪಿ ಬಂಧನ

ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಇಂದು 11 ಮಂದಿಯನ್ನು ಬಂಧಿಸಿದ್ದಾರೆ. ಮೊಹಮ್ಮದ್ ಶಮ್ಮಾಸ್, ರೋಬಿನ್ ಬಿಜು, ಆಲ್ವಿನ್ ಜಾಯ್, ಜಾಬಿನ್ ಮಹ್ರೂಫ್, ಜೆರೋನ್ ಸಿರಿಲ್, ಜಾಫಿನ್ ರಾಯ್ಚನ್, ಮಹ್ಮದ್ ಸೂರಜ್, ಆಶಿನ್ ಬಾಬು, ಅಬ್ದುಲ್ ಬಸಿತ್, ಅಬ್ದುಲ್ ಅನಾಸ್ ಮಹಮ್ಮದ್, ಅಕ್ಷಯ್ ಕೆ.ಎಸ್ ಬಂಧಿತರಾಗಿದ್ದು, ಎಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೂ ಏಳು ಮಂದಿಯ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಇತ್ತೀಚೆಗೆ ಅಡ್ಯಾರಿನ ವಳಚ್ಚಿಲ್ ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಇದೇ ರೀತಿಯ ರ್‍ಯಾಗಿಂಗ್  ಪ್ರಕರಣ ನಡೆದಿತ್ತು. ಕಿರಿಯ ವಿದ್ಯಾರ್ಥಿಗಳನ್ನು ತರಗತಿಗೆ ಕರೆಸ್ಕೊಂಡು ಕೀಟಲೆ ನಡೆಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು 9 ಮಂದಿಯನ್ನು ಬಂಧಿಸಿದ್ದರು. ಇದೀಗ ಒಂದೇ ತಿಂಗಳ ಅಂತರದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

LEAVE A REPLY

Please enter your comment!
Please enter your name here