ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ೧೧ ಮಂದಿ ಸಜೀವ ದಹನ!

0
99
ತಮಿಳುನಾಡು ಪಟಾಕಿ ಕಾರ್ಖಾನಿಯಲ್ಲಿ ಭಾರೀ ಸ್ಫೋಟ - ೧೧ ಮಂದಿ ಸಾವು!
Tap to know MORE!

ಚೆನ್ನೈ: ತಮಿಳುನಾಡಿನ ವಿರುಧುನಗರದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 11 ಮಂದಿ ಸಜೀವ ದಹನವಾಗಿದ್ದು, 36 ಮಂದಿ ಗಾಯಗೊಂಡಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ಕಾರ್ಖಾನೆ ತುಂಬೆಲ್ಲ ಬೆಂಕಿ ಆವರಿಸಿಕೊಂಡಿದೆ. ಮೃತಪಟ್ಟ 11 ಜನರ ಪೈಕಿ 9 ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಮೃತ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಮಾಡಲಾಗದ ಸ್ಥಿತಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ| ಹಲವರಿಗೆ ಗಾಯ

ಘಟನೆಯಲ್ಲಿ ಮೃತಪಟ್ಟವರಿಗೆ 2ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000ರೂ. ಪರಿಹಾರವನ್ನು ಪ್ರಧಾನಿ ಮೋದಿ ಪ್ರಕಟಿಸಿ, ಸಂತಾಪ ಸೂಚಿಸಿದ್ದಾರೆ. ತಮಿಳುನಾಡು ಸರಕಾರವು ಮೃತರಿಗೆ 3ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ.

ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಪಟಾಕಿ ತಯಾರಿಸಲು ಕೆಲವು ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಕಾರ್ಖಾನೆಯಲ್ಲಿನ ಬೆಂಕಿಯನ್ನು ನಂದಿಸಲು ವಿವಿಧ ಸ್ಥಳಗಳಿಂದ ಹತ್ತು ಅಗ್ನಿಶಾಮಕ ಘಟಕಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here