ಮತಾಂತರಗೊಂಡ ದಲಿತರಿಗೆ ಯಾವುದೇ ಮೀಸಲಾತಿ ಸೌಲಭ್ಯ ಸಿಗುವುದಿಲ್ಲ: ಕೇಂದ್ರ ಸರ್ಕಾರ

0
105
Tap to know MORE!

ನವದೆಹಲಿ: ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿ (ಎಸ್ ಸಿ) ಮೀಸಲು ಕ್ಷೇತ್ರಗಳಿಂದ ಸಂಸತ್ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಮತ್ತು ಇತರ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಹೇಳಿದ್ದಾರೆ.

ಬಿಜೆಪಿ ಸದಸ್ಯ ಜಿವಿಎಲ್ ನರಸಿಂಹರಾವ್ ರಾಜ್ಯಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರ ಕ್ರಿಶ್ಚಿಯನ್‌ಗೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ನೀಡಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಗೋಡ್ಸೆ ಅಧ್ಯಯನ ಕೇಂದ್ರವನ್ನು ತೆರೆದ ಹಿಂದೂ ಮಹಾಸಭಾ!

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಜಿವಿಎಲ್ ನರಸಿಂಹರಾವ್ ಅವರು ಈ ಹಿಂದೆ ದಲಿತ ಸಮುದಾಯಕ್ಕೆ ಸೇರಿದವರು, ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದವರು ಮೀಸಲು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುತ್ತೀರಾ ಎಂಬ ಕೇಂದ್ರದ ನಿಲುವಿನ ಬಗ್ಗೆ ಕೇಂದ್ರ ಕಾನೂನು ಸಚಿವರಿಂದ ಉತ್ತರ ಕೇಳಿದ್ದರು.

ಇದನ್ನೂ ಓದಿ: ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಶಿವಸೇನೆ!

ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಅರ್ಹತೆ ಕುರಿತು ಮಾತನಾಡಿದ ಪ್ರಸಾದ್ , ‘ಸಂವಿಧಾನದ 3ನೇ ಪ್ಯಾರಾ (ಪರಿಶಿಷ್ಟ ಜಾತಿ)ದಲ್ಲಿ ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಗೆ ಸೇರಿದವರೆಂದು ಪರಿಗಣಿಸಲಾಗುವುದಿಲ್ಲ ಅಂತ ತಿಳಿಸಿದೆ ಅಂತ ಹೇಳಿದರು. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮದ ಮಡಿಲಿನಲ್ಲಿ ಉಳಿಯಲು ಬಯಸುವ ವರು ಮತ್ತು ಇಸ್ಲಾಂ ಕ್ರೈಸ್ತ ಧರ್ಮವನ್ನು ಅಪ್ಪಿಕೊಳ್ಳುವ ದಲಿತರ ನಡುವಿನ ವ್ಯತ್ಯಾಸವನ್ನು ಕೇಂದ್ರ ಕಾನೂನು ಸಚಿವರು ಸ್ಪಷ್ಟವಾಗಿ ಎಳೆಎಳೆಯಾಗಿ ಬಿಡಿಸಿ ಹೇಳಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here