ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ನಾನು ಯಾವ ತಪ್ಪನ್ನು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಬುಧವಾರ ರಾಜೀನಾಮೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಬಿಜೆಪಿ ಪಕ್ಷಕ್ಕೆ ಮತ್ತು ಸರಕಾರಕ್ಕೆ ಮುಜುಗರವುಂಟಾಗಬಾರದೆಂದು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.