ತಮಿಳುನಾಡು ವಿಧಾನಸಭಾ ಚುನಾವಣೆ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಟಿ ಖುಷ್ಬೂ ಸುಂದರ್‌ಗೆ ಬಿಜೆಪಿ ಟಿಕೆಟ್

0
433
Tap to know MORE!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದು, ಭಾನುವಾರ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಎಲ್ ಮುರುಗನ್, ಎಚ್ ರಾಜಾ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಈ ಪಟ್ಟಿಯಲ್ಲಿದ್ದಾರೆ.

ಇದನ್ನೂ ಓದಿ: ಮಾಜಿ ಐಪಿಎಸ್ ಅಣ್ಣಾಮಲೈ ಈಗ ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷ!

ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ತಮಿಳುನಾಡಿನ ಬಿಜೆಪಿಗೆ ಸೇರ್ಪಡೆಯಾದ ಏಳು ತಿಂಗಳ ಬಳಿಕ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅರಾವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸುತ್ತಿದ್ದಾರೆ.

ಬಿಜೆಪಿ ಮಹಿಳಾ ವಿಭಾಗದ ಮುಖ್ಯಸ್ಥೆ ವನತಿ ಶ್ರೀನಿವಾಸನ್ ಅವರು ಕೊಯಮತ್ತೂರು (ದಕ್ಷಿಣ) ಕ್ಷೇತ್ರದಲ್ಲಿ ನಟ ಮತ್ತು ಮಕ್ಕಳ್ ನೀಧಿ ಮಯಂ (ಎಂಐಎಂ) ಮುಖ್ಯಸ್ಥ ಕಮಲ್ ಹಾಸನ್ ಅವರಿಗೆ ಮುಖಾಮುಖಿಯಾಗಲಿದ್ದು, ನಟಿ ಖುಷ್ಬೂ ಸುಂದರ್ ಅವರು ಚೆನ್ನೈನ ತೌಸಂಡ್ ಲೈಟ್ಸ್ ಕ್ಷೇತ್ರದಲ್ಲಿ ಡಿಎಂಕೆಯ ಡಾ.ಎನ್. ಎನಿಳನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. 2020 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿ ಸೇರಿದ ಖುಷ್ಬೂ ಸುಂದರ್ ಸಹ ಹೊಸಬರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅರಾವಕುರಿಚಿ ಸ್ಥಳೀಯ ಕ್ಷೇತ್ರವಾದ್ದರಿಂದ ಕುತೂಹಲ ಕೆರಳಿಸಿದೆ. 2019ರಲ್ಲಿ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ಅವರು 2020ರ ಆಗಸ್ಟ್‌ನಲ್ಲಿ ಬಿಜೆಪಿಗೆ ಸೇರಿದ್ದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಲ್ಲಿ ಒಬ್ಬರಾಗಿ ನೇಮಕಗೊಂಡಿದ್ದರು.

LEAVE A REPLY

Please enter your comment!
Please enter your name here