ಬೆಂಗಳೂರು(ಮಾ.14): ದಿನೇ ದಿನೇ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆ, ಮುಂಜಾಗ್ರತೆ ವಹಿಸುವಂತೆ ರಾಜ್ಯ ಸರ್ಕಾರವು ಜನರಿಗೆ ಎಚ್ಚರಿಕೆ ನೀಡಿದೆ. ಜೊತೆಗೆ ರಾಜ್ಯದಲ್ಲಿ ಕೊರೋನಾ ತಡೆಗಾಗಿ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ ನಾಳೆ ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಕೋವಿಡ್ ತಂತ್ರಜ್ಞರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಬಿಎಸ್ವೈ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಒಟ್ಟು 6 ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಎಷ್ಟೇ ಕ್ರಮ ಕೈಗೊಂಡರೂ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ, ಖಡಕ್ ಸಂದೇಶ ರವಾನಿಸಲಾಗುತ್ತದೆ. ಸಭೆ ನಡೆಸುವಂತೆ ಈಗಾಗಲೇ ಆರೋಗ್ಯ ಸಚಿವ ಕೆ.ಸುಧಾಕರ್ ಸಿಎಂ ಬಳಿ ಮನವಿ ಮಾಡಿದ್ದರು. ಕೊರೋನಾ ವಿಷಯದಲ್ಲಿ ಜನರು ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಪ್ರಸ್ತಾಪ ಕೂಡ ಮಾಡಿದ್ದರು.
ಇದನ್ನೂ ಓದಿ: ಯಡಿಯೂರಪ್ಪ ಆಧುನಿಕ ಹಿಟ್ಲರ್ | ಬಿಜೆಪಿ, ಆರ್ಎಸ್ಎಸ್ ಕನ್ನಡ ವಿರೋಧಿ – ವಾಟಾಳ್ ನಾಗರಾಜ್ ವಾಗ್ದಾಳಿ!
ಈಗಾಗಲೇ ಎರಡನೇ ಅಲೆಯ ಬಗ್ಗೆಯೂ ತಾಂತ್ರಿಕ ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆ ಕೊರೋನಾ ಕಡಿವಾಣಕ್ಕೆ ಏನು ಮಾಡಬಹುದು ಎಂದು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಾಂತ್ರಿಕ ತಜ್ಞರ ಅಭಿಪ್ರಾಯಗಳನ್ನು ಸಂಗ್ರಹ ಮಾಡಲಿದ್ದಾರೆ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಅವರ ಅಭಿಪ್ರಾಯದ ಮೇಲೆ ಕಠಿಣ ನಿಯಮಗಳನ್ನು ಜಾರಿಗೆ ತರಲು ನಿರ್ಧಾರ ಮಾಡಲಾಗುತ್ತದೆ. ಈಗಾಗಲೇ ಟಫ್ ರೂಲ್ಸ್ ಬಗ್ಗೆ ಆರೋಗ್ಯ ಇಲಾಖೆ ಕೂಡ ಸಿದ್ದತೆ ನಡೆಸುತ್ತಿದೆ. ನಾಳೆಯ ಸಭೆಯಲ್ಲಿ ಈ ಬಗ್ಗೆ ಆರೋಗ್ಯ ಸಚಿವರು ಮಂಡಿಸಲಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ಸಿಎಂ ನೇತೃತ್ವದ ಸಭೆ ಮಹತ್ವ ಪಡೆದಿದೆ.