ತೋಕೂರಿನಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ

0
181
Tap to know MORE!

ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)
ಇದರ ಸಹಭಾಗಿತ್ವದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವು ಜರುಗಿತು.

ದೇಶಾದ್ಯಂತ ಆರಂಭಗೊಂಡ ಕೋವಿಡ್-19 ಲಸಿಕೆ ಅಭಿಯಾನದ ಅಂಗವಾಗಿ ಇದುವರೆಗೆ ಕೊರೊನಾ ವಾರಿಯರ್ಸ್, 60 ವರ್ಷ ಮೇಲ್ಪಟ್ಟವರು ಹಾಗೂ ಅನಾರೋಗ್ಯಪೀಡಿತರಿಗೆ ಲಸಿಕೆ ನೀಡಲಾಗಿತ್ತು. ಅಂತೆಯೇ ಇದರ ಮುಂದುವರಿದ ಹಂತವಾಗಿ ಎಪ್ರಿಲ್ 01, 2021 ರಿಂದ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಅನುಕೂಲಕ್ಕಾಗಿ ಈ ಕಾರ್ಯಕ್ರಮವನ್ನು ಸಂಸ್ಥೆಯ ವತಿಯಿಂದ ಆಯೋಜಿಸಲಾಗಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಪ್ರಾಥಮಿಕ ಆರೋಗ್ಯ ಕೇಂದ್ರ, ಅತ್ತೂರು, ಕೆಮ್ರಾಲ್ ಇದರ ಡಾ. ಚಿತ್ರಾ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉಧ್ಘಾಟನೆಯನ್ನು ನೆರವೇರಿಸಿದರು. ನಂತರ ಅವರು ಮಾತನಾಡಿ ಎಲ್ಲೆಡೆ ಹೆಚ್ಚುತ್ತಿರುವ ಕೊರೋನಾ ವೈರಸ್‌‍ನಿಂದ ಉಂಟಾಗುತ್ತಿರುವ ಸವಾಲು ಮತ್ತು ಅಪಾಯವನ್ನು ಎದುರಿಸಲು ಕೇಂದ್ರ ಸರಕಾರದ ಅನುಮೋದನೆಯೊಂದಿಗೆ ನೀಡಲಾಗುತ್ತಿರುವ ಕೊರೋನಾ ಲಸಿಕೆಗಳ ಸದುಪಯೋಗ ಪಡೆಯುವುದರ ಜೊತೆಗೆ ಜನರು ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೆ ಪಾಲಿಸಿ ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪಡುಪಣಂಬೂರು ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಅವರು ಕೊರೊನಾ ಲಸಿಕೆಗಳನ್ನು ಬಿಡುಗೊಳಿಸಿದರು.

ವೇದಿಕೆಯಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್‍ನ ಕಾರ್ಯನಿರ್ವಹಣಾ ಅಧಿಕಾರಿ ಅನಿತಾ ಕ್ಯಾಥರಿನ್, ಪ್ರಾಥಮಿಕ ಆರೋಗ್ಯ ಕೇಂದ್ರ, ಅತ್ತೂರು, ಕೆಮ್ರಾಲ್ ಇದರ ಮೇಲ್ವಿಚಾರಕಿ ಶ್ರೀಮತಿ ಸುಜಾತ ಬಿ. ಕಿರಿಯ ಆರೋಗ್ಯ ಸಹಾಯಕಿ ಮಾರ್ಗರೆಟ್ ಸುದರ್ಶಿನಿ ಮತ್ತು ಶ್ರೀಮತಿ ಮಂಜುಳಾ, ಹಾಗೂ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ ಇವರು ಉಪಸ್ಥಿತರಿದ್ದರು.

ಪಡುಪಣಂಬೂರು ಗ್ರಾಮ ಪಂಚಾಯತ್‍ನ ಕಾರ್ಯನಿರ್ವಹಣಾ ಅಧಿಕಾರಿ ಅನಿತಾ ಕ್ಯಾಥರಿನ್ ಕೊರೋನಾ ಲಸಿಕೆಯ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷೆಯಾದ ಶ್ರೀಮತಿ ಕುಸುಮಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಲತಾ ಲೋಕೇಶ್, ಶ್ರೀಮತಿ ಯಶೋದಾ ದೇವಾಡಿಗ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ, ಅತ್ತೂರು, ಕೆಮ್ರಾಲ್ ಇದರ ಸಿಬ್ಬಂದಿಗಳು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ಇದರ ಸದಸ್ಯರಾದ ಶ್ರೀ ನರೆಂದ್ರ ಕೆರೆಕಾಡು, ಸಂಸ್ಥೆಯ ಗೌರವ ಮಾರ್ಗದರ್ಶಕರಾದ ಶ್ರೀ ರಮೇಶ್ ಅಮೀನ್, ಸಂಸ್ಥೆಯ ಪದಾಧಿಕಾರಿಗಳು ಸರ್ವ ಸದಸ್ಯರು, ಸದಸ್ಯೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಸುಮಾರು 166 ಮಂದಿ ಗ್ರಾಮಸ್ಥರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕೊರೊನಾ ಲಸಿಕೆ ತೆಗೆದುಕೊಳ್ಳಲು ಹಿಂಜರಿಯುತ್ತಿರುವ ಜನತೆಗೆ ಸ್ಪೂರ್ತಿ ತುಂಬಿ, ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂಸ್ಥೆಯ ಹೊರಾಂಗಣದಲ್ಲಿ ಇರಿಸಲಾಗಿದ್ದ ‘ನಾವು ಸುರಕ್ಷಿತವಾಗಿದ್ದಾಗ ರಾಷ್ಟ್ರ ಸುರಕ್ಷಿತವಾಗಿದೆ’ ಎಂಬ ಸಂದೇಶ ಹೊಂದಿರುವ ಸೆಲ್ಫಿ ಸ್ಟ್ಯಾಂಡ್‌ ವಿಶೇಷವಾಗಿ ಜನರ ಗಮನ ಸೆಳೆಯಿತು.

ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಕಿರಿಯ ಆರೋಗ್ಯ ಸಹಾಯಕಿ, ಮಾರ್ಗರೆಟ್ ಸುದರ್ಶಿನಿ ವಂದಿಸಿದರು. ಸಂಸ್ಥೆಯ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಪ್ರಶಾಂತ್ ಕುಮಾರ್ ಬೇಕಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here