BREAKING| 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್!

0
210
Tap to know MORE!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಾ ಪಟ್ಟ ಹಿನ್ನಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ತಿಳಿಸಿ ಆದೇಶಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ. ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಮೂಲಕ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ಬಾರಿ ಬಾಸ್ ಮಾಡಿದೆ. ರಾಜ್ಯದಲ್ಲಿ ನಿನ್ನೆ ಮತ್ತೆ ಕೊರೋನಾ ಆರ್ಭಟಿಸಿತ್ತು. 24 ಗಂಟೆಯಲ್ಲಿ ರಾಜ್ಯಾಧ್ಯಂತ 15,785 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಇಂದು ಕಿಲ್ಲರ್ ಕೊರೋನಾ ಅಟ್ಟಹಾಸ ಮೆರೆದಿದ್ದು, ಕಳೆದ 24 ಗಂಟೆಯಲ್ಲಿ 146 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ನಲ್ಲಿ, 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 9,618 ಜನರು ಸೇರಿದಂತೆ ರಾಜ್ಯಾಧ್ಯಂತ 15,785 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 11,76,850ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 7098 ಜನರು ಸೇರಿದಂತೆ ಇದುವರೆಗೆ 10,21,250 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 1,42,084 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿತ್ತು.

ಇನ್ನೂ ನಿನ್ನೆ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 97 ಜನರು ಸೇರಿದಂತೆ ರಾಜ್ಯಾದ್ಯಂತ ಸೋಂಕಿತರಾದಂತ 146 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 13,497ಕ್ಕೆ ಏರಿಕೆಯಾಗಿದೆ ಎಂಬುದಾಗಿ ತಿಳಿಸಿತ್ತು.

LEAVE A REPLY

Please enter your comment!
Please enter your name here