ಎ.28 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಮುಂದೂಡಿಕೆ

0
157
Tap to know MORE!

ಬೆಂಗಳೂರು, (ಏ.25): ಇದೇ ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಇಂದು (ಭಾನುವಾರ) ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ತಿಳಿಸಿದ್ದಾರೆ.ಪರೀಕ್ಷೆ ಮುಂದೂಡಿರುವ ಕಾರಣ ವಿದ್ಯಾರ್ಥಿಗಳುವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಸಚಿವರು ಕಿವಿಮಾತು‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here