BREAKING| ಎಲ್ಲಾ ರೀತಿಯ ಮೆರವಣಿಗೆಗಳಿಗೆ ನಿಷೇಧ ಹೇರಿದ ಚುನಾವಣಾ ಆಯೋಗ!

0
252
Tap to know MORE!

ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೂ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಮತ ಎಣಿಸುವ ದಿನದಂದು ಅಥವಾ ನಂತರವೂ ಎಲ್ಲಾ ರೀತಿಯ ಮೆರವಣಿಗೆಗಳನ್ನು ನಿಷೇಧಿಸಿದೆ.

ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ಎಣಿಕೆ ಮೇ 2 ರಂದು ನಡೆಯಲಿದೆ.

ಕೋವಿಡ್-19 ರ ಸಾಂಕ್ರಾಮಿಕದ ಎರಡನೇ ಅಲೆಯ ಮಧ್ಯೆ ರಾಜಕೀಯ ರ್ಯಾಲಿಗಳಿಗೆ ಅವಕಾಶ ನೀಡಿದ್ದಕ್ಕಾಗಿ ಮದ್ರಾಸ್ ಹೈಕೋರ್ಟ್ ಸೋಮವಾರ ಭಾರತದ ಚುನಾವಣಾ ಆಯೋಗವನ್ನು ದೂರಿದ ಒಂದು ದಿನದ ನಂತರ ಆಯೋಗವು ಈ ನಿರ್ಧಾರಕ್ಕೆ ಬಂದಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here