ಮಂಗಳೂರು: ವೆನ್ಲಾಕ್ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಸೋಂಕಿತ!

0
359
Tap to know MORE!

ಮಂಗಳೂರು: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯ 2ನೇ ಮಹಡಿಯಿಂದ ಕೊರೊನಾ ಸೋಂಕಿತನೋರ್ವ ಹಾರಿದ ಘಟನೆ ಇಂದು ನಡೆದಿದ್ದು, ಆತ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಮಂಗಳೂರಿನ ಕಲ್ಲಮುಂಡ್ಕೂರಿನ ಬಾಾನಂಗಡಿ ನಿವಾಸಿ ಹರೀಶ್(30) 2ನೇ ಮಹಡಿಯಿಂದ ಹಾರಿದಾತ. ಹರೀಶ್‌ಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಇದನ್ನೂ ಓದಿ: ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 12 ಸೇರಿದಂತೆ ಒಟ್ಟು 24 ರೋಗಿಗಳು ಸಾವು!

ಆದರೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ‌ ಇವರು ಇಂದು ಕೋವಿಡ್ ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ಪರಿಣಾಮ ತಲೆಗೆ ಹಾಗೂ ದೈಹಿಕವಾಗಿ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here