BIG NEWS| ಮೈಕ್ರೋಸಾಫ್ಟ್ ಮಾಜಿ ಸಿಇಒ ಬಿಲ್ ಗೇಟ್ಸ್ – ಮೆಲಿಂಡಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ವಿಚ್ಛೇದನ!

0
293

ಮೈಕ್ರೋಸಾಫ್ಟ್‌ನ ಸಂಸ್ಥಾಪಕ ಮತ್ತು ಮಾಜಿ ಸಿಇಒ ಬಿಲ್ ಗೇಟ್ಸ್ ಮತ್ತು ಅವರ ಪತ್ನಿ ಮೆಲಿಂಡಾ ಫ್ರೆಂಚ್ ಗೇಟ್ಸ್ ಅವರು 27 ವರ್ಷಗಳ ವೈವಾಹಿಕ ಜೀವನದಿಂದ ವಿಚ್ಛೇದನ ಪಡೆಯಲಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಶಿಕ್ಷಣ, ಲಿಂಗ ಸಮಾನತೆ ಮತ್ತು ಆರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಹಾಗೂ ಇನ್ನಿತರ ಲೋಕೋಪಕಾರಿ ಸೇವಾ ರಂಗದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ.

“ಇದರ ಬಗ್ಗೆ ಸಾಕಷ್ಟು ಚಿಂತನೆ ಮತ್ತು ಸಾಕಷ್ಟು ವರ್ಕೌಟ್ ಮಾಡಿದ ನಂತರ, ನಮ್ಮ ದಾಂಪತ್ಯವನ್ನು ಕೊನೆಗೊಳಿಸುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ” ಎಂದು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಹೇಳಿಕೆಯಲ್ಲಿ ಬರೆದಿದ್ದಾರೆ. ಹೀಗೆಂದು ಬಿಲ್ ಗೇಟ್ಸ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋವಿಡ್-19: ಭಾರತಕ್ಕೆ ₹135 ಕೋಟಿ ನೆರವು ನೀಡುವುದಾಗಿ ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ

“ಕಳೆದ 27 ವರ್ಷಗಳಲ್ಲಿ, ನಾವು ಮೂರು ಮಕ್ಕಳನ್ನು ಬೆಳೆಸಿದ್ದೇವೆ ಮತ್ತು ಆರೋಗ್ಯಕರ ಜೀವನವನ್ನು ನಡೆಸಲು ಎಲ್ಲಾ ಜನರಿಗೆ ಅನುವು ಮಾಡಿಕೊಡುವಂತೆ ಪ್ರಪಂಚದಾದ್ಯಂತ ಕೆಲಸ ಮಾಡುವ ಒಂದು ಬಹುರಾಷ್ಟ್ರೀಯ ಸಂಸ್ಥೆಯನ್ನೂ ಸ್ಥಾಪಿಸಿದ್ದೇವೆ. ಆ ಧ್ಯೇಯದಲ್ಲಿ ನಾವು ಮುಂದೆಯೂ ಒಟ್ಟಿಗೆ ಕೆಲಸವನ್ನು ಮುಂದುವರಿಸುತ್ತೇವೆ. ಆದರೆ ನಮ್ಮ ಜೀವನದ ಮುಂದಿನ ಹಂತದಲ್ಲಿ ನಾವು ದಂಪತಿಗಳಾಗಿ ಒಟ್ಟಿಗೆ ಬಾಳಬಹುದು ಎಂದು ನಮಗೆ ನಂಬಿಕೆಯಿಲ್ಲ” ಎಂದು ಬರೆದುಕೊಂಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here