ಬೆಂಗಳೂರು: ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್ ಡೌನ್ ಇಲ್ಲ. ಹಾಲಿ ಇರುವ ಜನತಾ ಲಾಕ್ ಡೌನ್ ಮಾತ್ರ ಇರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಕೂರಬೇಕು. ಸ್ಥಳದಲ್ಲೇ ತೀರ್ಮಾನ ತೆಗೆದುಕೊಳ್ಳಬೇಕು, ಸಂಪೂರ್ಣ ಸ್ವತಂತ್ರ ಉಸ್ತುವಾರಿ ಸಚಿವರಿಗೆ ಕೊಟ್ಟಿದ್ದೇವೆ. ರಾಜ್ಯಕ್ಕೆ ಅಗತ್ಯ ಇರುವ ಆಕ್ಸಿಜನ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರೆಮಿಡಿಸಿವರ್ ಔಷಧಿ ನಿರ್ವಹಣೆಗೆ, ಮಾನವಸಂಪನ್ಮೂಲ ನಿರ್ವಹಣೆಗೆ ಅಶ್ವಥನಾರಾಯಣ್ ಅವರಿಗೆ ಜವಾಬ್ದಾರಿ ಹೊರಿಸಲಾಗಿದೆ. ಬೆಡ್ ವ್ಯವಸ್ಥೆ, ಬೆಡ್ ಸಮಸ್ಯೆ ನಿರ್ವಹಣೆ ಜವಾಬ್ದಾರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್ ಗೆ ವಹಿಸಿದ್ದೇವೆ. ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣಾ ಜವಾಬ್ದಾರಿ ಅರವಿಂದ್ ಲಿಂಬಾವಳಿಗೆ ವಹಿಸಿರುವುದಾಗಿ ಸಿಎಂ ಮಾಹಿತಿ ನೀಡಿದರು.
850 ಟನ್ ಹಂಚಿಕೆಗೆ ಏರಿಕೆ ಮಾಡಿದ್ದಾರೆ. ಜಿಂದಾಲ್ ನಿಂದ ಮಹಾರಾಷ್ಟ್ರಕ್ಕೆ ಹೋಗ್ತಿರುವ ಹಂಚಿಕೆಯನ್ನ ರಾಜ್ಯಕ್ಕೆ ನೀಡಲು ಮನವಿ ಮಾಡಿದ್ದೇವೆ. ಅದಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ. ಹೊರರಾಜ್ಯಗಳಿಂದ ಬರುತ್ತಿರುವ ಆಕ್ಸಿಜನ್ ಸರಬರಾಜು ವಿಳಂಬ ಆಗ್ತಿದೆ, ಈ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.