BIG NEWS| ರಾಜ್ಯದಲ್ಲಿ ಕೊರೋನಾ ದಾಖಲೆ | ಒಂದೇ ದಿನ 50 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆ | 24 ಘಂಟೆಯಲ್ಲಿ 346 ಸೋಂಕಿತರ ಸಾವು

0
167
Tap to know MORE!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 346 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 16884ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 50,112 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,41,046ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 26841 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,36854ಕ್ಕೆ ಏರಿಕೆಯಾಗಿದೆ. ಇನ್ನು 4,87,288 ಸಕ್ರೀಯ ಪ್ರಕರಣಗಳಿವೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1,529 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 50,345 ಗೆ ಏರಿದ್ದು, 9,331  ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 608 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 40,246 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 4 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 766 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 1,625 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,919 ಗೆ ಏರಿದೆ.

ಸದ್ಯ 2,512 ಸಕ್ರಿಯ ಪ್ರಕರಣಗಳು ಇದೆ‌. ಸೋಂಕಿನ ಹಾವಳಿ ಮುಂದೆ ಇಂದು 35,365 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 31,233 ಗೆ ಏರಿದೆ. ಜಿಲ್ಲೆಯಲ್ಲಿ ಇಂದು 3 ಸೋಂಕಿತರ ಬಲಿಯಾಗಿದ್ದು, ಇದುವರೆಗೆ 206 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here