FLASH| ದ.ಕ ಜಿಲ್ಲೆಯಲ್ಲಿ ಟಫ್ ರೂಲ್ಸ್ | ಬೆ. 9.ರವರೆಗೆ ಮಾತ್ರ ಅಂಗಡಿ ಓಪನ್

0
205
Tap to know MORE!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಪ್ರಮುಖ ಸಭೆ ಗುರುವಾರ ನಡೆಯಿತು.

ನಾಳೆ (ಮೇ.7) ಬೆಳಗ್ಗೆ 6 ರಿಂದ 9 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗುವುದು. ಹಾಗೂ 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರುವಂತಾಗಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಮೇ 8 ರಿಂದ 16 ರವರೆಗೆ ಕೇರಳದಲ್ಲಿ ಲಾಕ್‌ಡೌನ್ ಜಾರಿ!

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ‌‌

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸಭೆಯ ನಿರ್ಣಯಗಳು

  • ಬೆಳಗ್ಗೆ 6 ರಿಂದ 9 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ
    • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು
  • ಮೇ 15ರ ಬಳಿಕ ಎಲ್ಲಾ ರೀತಿಯ ಕಾರ್ಯಕ್ರಮಳಿಗೆ ನಿರ್ಬಂಧ
  • ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು‌
    • ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್
    • ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ
  • ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ
    • ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ
    • ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ
    • ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ‌

LEAVE A REPLY

Please enter your comment!
Please enter your name here