ಎಲ್ಲಾ ಸಾವು-ನೋವಿಗೆ ಚೀನೀ ವೈರಸ್ ಕಾರಣ; ಪ್ರಧಾನಿ ಮೋದಿ ಅಲ್ಲ: ಸಿ.ಟಿ.ರವಿ

0
483
Tap to know MORE!

ಬೆಂಗಳೂರು, ಮೇ 13: ಸಾವು, ಸಾಂಕ್ರಾಮಿಕ ರೋಗಗಳನ್ನು ಮುಂದಿಟ್ಟುಕೊಂಡು ಕೆಲವರು ವಿಕೃತಾನಂದ ಪಡುತ್ತಿದ್ದಾರೆ. ರೋಗದ ವಿಷಯದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ವಿದೇಶಗಳ ಜನಸಂಖ್ಯೆ ಹಾಗೂ ಮರಣ ಪ್ರಮಾಣ, ಭಾರತದ ಜನಸಂಖ್ಯೆ ಮತ್ತು ಮರಣ ಪ್ರಮಾಣ ಎಲ್ಲವನ್ನು ಹೋಲಿಕೆ ಮಾಡಿ ನೋಡಲಿ. ಇಟಲಿಯಲ್ಲಿ ನರೇಂದ್ರ ಮೋದಿ ಪ್ರಧಾನಿಯಲ್ಲ. ಈಗ ನಾವು ಈ ಸಾವು-ನೋವಿಗೆ ಚೀನಾ ವೈರಸ್ ಅನ್ನು ದೂರಬೇಕೇ ಹೊರತು, ಪ್ರಧಾನಿ ನರೇಂದ್ರ ಮೋದಿಯವರನ್ನಲ್ಲ ಎಂದರು.

ಪರಿಹಾರ ಹಣ ಕೊಡಲು ನಾವೇನು ದುಡ್ಡು ಪ್ರಿಂಟ್ ಮಾಡ್ತೇವಾ?: ಸಚಿವ ಈಶ್ವರಪ್ಪ

ಬಾಧಿಸುತ್ತಿರುವ ಈ ಕೊರೊನಾ ಸೋಂಕು ಪ್ರಮಾಣ ಹೆಚ್ಚುತ್ತಿರುವ ಕಾರಣ ನಮ್ಮ ಸಿದ್ಧತೆ ಸಾಕಾಗಿಲ್ಲ ಎನ್ನುವುದನ್ನು ನಾನೂ ಒಪ್ಪುತ್ತೇನೆ. ಆರಂಭದಲ್ಲಿ ಕೆಲವು ಗೊಂದಲ ಇದ್ದಿದ್ದು ನಿಜ. ಆದರೆ ಈಗ ಎಲ್ಲರಿಗೂ ಜವಾಬ್ದಾರಿ ನೀಡಲಾಗಿದೆ. ಅವರು ಸಮರ್ಥವಾಗಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here