ಇನ್ನು ವಾರಾಂತ್ಯ ಕರ್ಫ್ಯೂ ಇರುವುದಿಲ್ಲ: ಶಾಸಕ ಕಾಮತ್

0
320
Tap to know MORE!

ಮಂಗಳೂರು:  ನಗರದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ‌ ಕೋಟ ಶ್ರೀನಿವಾಸ್ ಪೂಜಾರಿ ಅವರಲ್ಲಿ ಶಾಸಕ ಕಾಮತ್ ಮನವಿ ಮಾಡಿಕೊಂಡ ಪ್ರಕಾರ ಮಂಗಳೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸುವಂತೆ ಉಸ್ತುವಾರಿ ಸಚಿವರು ಆದೇಶ ಜಾರಿಗೊಳಿಸಲಿದ್ದಾರೆ ಎಂದು ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯಂತೆ, ಶನಿವಾರ-ಭಾನುವಾರವೂ ಬೆಳಿಗ್ಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಇರುತ್ತದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here