DRDO ಅಭಿವೃದ್ಧಿಪಡಿಸಿದ 2DG ಆ್ಯಂಟಿ ಕೋವಿಡ್ ಔಷಧಿ ಲೋಕಾರ್ಪಣೆ

0
184
Tap to know MORE!

ನವದೆಹಲಿ, ಮೇ 17: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಮತ್ತು ಅಲೈಡ್ ಸೈನ್ಸ್ (INMAS), ಹೈದರಾಬಾದ್‌ನ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ (DRL) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿ 2-ಡಿಯೋಕ್ಸಿ-ಡಿ-ಗ್ಲೂಕೋಸ್ (2-DG) ಆ್ಯಂಟಿ-ಕೋವಿಡ್ -19 ಚಿಕಿತ್ಸಕ ಔಷಧಿಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಲೋಕಾರ್ಪಣೆ ಮಾಡಿದರು.

ಮೊದಲ ಹಂತದ 2-ಡಿಯೋಕ್ಸಿ-ಡಿ-ಗ್ಲೂಕೋಸ್ (2-ಡಿಜಿ) ಔಷಧಿಯ 10,000 ಡೋಸ್‌ಗಳನ್ನು ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ.

ಕೊರೋನಾ ಲಸಿಕೆಯ ನೇರ ಖರೀದಿಗೆ ೧೦೦ ಕೋಟಿ ನೀಡಲು ಕರ್ನಾಟಕ ಕಾಂಗ್ರೆಸ್ ನಿರ್ಧಾರ

ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಕೊ) 2020 ರ ಮೇ ತಿಂಗಳಲ್ಲಿ ಕೋವಿಡ್-19 ರೋಗಿಗಳಲ್ಲಿ 2-ಡಿಜಿ ಯ ಎರಡನೇ ಅಲೆಯ ಚಿಕಿತ್ಸೆಯ ಪ್ರಯೋಗಕ್ಕೆ ಅನುಮತಿ ನೀಡಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here