ಶೈಕ್ಷಣಿಕ ಸಂಸ್ಥೆ – ಶಾಲಾ ಮೈದಾನಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಮುಂದಾದ ರಾಜ್ಯ ಸರ್ಕಾರ!

0
184
Tap to know MORE!

ವರದಿ: ಸಿದ್ಧಾರ್ಥ್ ಎಸ್.

ಬೆಂಗಳೂರು: ಇದುವರೆಗೆ ಕೇವಲ ಆಸ್ಪತ್ರೆಗಳಲ್ಲಿ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಕೊಡಲಾಗುತ್ತಿತ್ತು. ಆದರೆ ಇನ್ನು ಮುಂದೆ, ಆಸ್ಪತ್ರೆಯ ಬದಲಾಗಿ ಆಸ್ಪತ್ರೆಗಳಿಂದ ಹೊರಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ವಿಶಾಲವಾದ ಶಾಲಾ ಕಟ್ಟಡ, ಶಾಲಾ ಮೈದಾನ, ಕ್ರೀಡಾಂಗಣ ಇತ್ಯಾದಿ ಕಡೆಗಳಲ್ಲಿ ಲಸಿಕೆ ವಿತರಿಸಲು ಮುಂದಾಗಿದೆ.

ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂತಹ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ 4 ಗಂಟೆ ಕಾಲ ನಡೆದ ಕಾರ್ಯಪಡೆಯ ಸುದೀರ್ಘ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ.

LEAVE A REPLY

Please enter your comment!
Please enter your name here