ಕೋವಿಡ್ ಸಂದರ್ಭ ಅಗಲಿದ ಶಿಕ್ಷಕರ ಮಾಹಿತಿ ನೀಡಲು ಶಿಕ್ಷಣ ಇಲಾಖೆ ಆದೇಶ

0
210
Tap to know MORE!

ಬೆಂಗಳೂರು: ರಾಜ್ಯ ಶಿಕ್ಷಕರು ಕರ್ತವ್ಯದ ವೇಳೆ ಕೊರೊನಾ ಸೋಂಕು ತಗುಲಿ ಅಥವಾ ಇತರೆ ಸಮಸ್ಯೆಗಳಿಂದ ಮೃತಪಟ್ಟಲ್ಲಿ ಅವರ ಕುಟುಂಬಗಳಿಗೆ ಸವಲತ್ತು ಕಲ್ಪಿಸುವ ಸಂಬಂಧ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಕರ್ತವ್ಯ ನಿರತ ಬೋಧಕ ಸಿಬ್ಬಂದಿಗಳು ಕೋವಿಡ್‌ನಿಂದ ಮೃತಪಟ್ಟಲ್ಲಿ ಕೂಡಲೇ ಸವಿವರ ಮಾಹಿತಿ ಸಲ್ಲಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ನೀರ್ದೇಶನ ನೀಡಿದ್ದರು. ಇದರ ಹಿಂದೆಯೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೊರೊನಾ ಕರ್ತವ್ಯ ನಿರ್ವಹಿಸುತ್ತಿರುವಾಗ ಸೋಂಕು ತಗುಲಿ ನಿಧನ ಹೊಂದಿರುವ ಅಧಿಕಾರಿ / ನೌಕರ ಹಾಗೂ ಶಿಕ್ಷಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಮಂಜೂರು ಮಾಡಲು ಸಂಬಂಧಿಸಿದ ಪ್ರಾಧಿಕಾರಗಳ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆ ಆಯುಕ್ತರ ಆದೇಶದಲ್ಲಿ ಸೂಚಿಸಲಾಗಿದೆ. ಕೊರೊನಾ ಕರ್ತವ್ಯ ವೇಳೆ ಸೋಂಕು ಅಥವಾ ಇತರೆ ಅನಾರೋಗ್ಯ ಸಮಸ್ಯೆಗಳಿಂದ ಮೃತಪಟ್ಟ ಅಧಿಕಾರಿ / ಇತರೆ ಸಿಬ್ಬಂದಿ / ಶಿಕ್ಷಕರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸೂಕ್ತ ಸರ್ಕಾರಿ ಉದ್ಯೋಗ ಮತ್ತು ಇತರೆ ಸವಲತ್ತುಗಳನ್ನು ಮಂಜೂರು ಮಾಡಲು ತುರ್ತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here