FLASH| ₹1,250 ಕೋಟಿ ರೂಪಾಯಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ!

0
490
Tap to know MORE!

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಸರ್ಕಾರ ಮಾಡಿದೆ. ಕೆಲವಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. 6-10ಕ್ಕೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿತ್ತು ಎಂದರು.

ಇದೇ ವೇಳೆ 1, 250 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‍ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ, ಅಗಸ, ಚಮ್ಮಾರ, ಕಮ್ಮಾರ ಸೇರಿದಂತೆ ಅಸಂಘಟಿತರಿಗೆ 2 ಸಾವಿರ, ರಸ್ತೆಬದಿ ವ್ಯಾಪಾರಿಗಳಿಗೆ 2 ಸಾವಿರ, ರಸ್ತೆ ಬದಿಯ ವ್ಯಾಪಾರಿಗಳಿಗೆ 2 ಸಾವಿರ, ಕಲಾವಿದರು, ಕಲಾ ತಂಡಕ್ಕೆ 3 ಸಾವಿರ, ಸಾಲ ಮರುಪಾವತಿಗೆ ಜುಲೈ ವರೆಗೆ ವಿಸ್ತರಣೆ ಮಾಡಲಾಗುವುದು ಎಂದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ 5 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ಕೊಡಲಾಗುತ್ತದೆ. ಅಲ್ಲದೆ ಮೇ, ಜೂನ್ ರೇಷನ್ ಕೊಡಲಾಗುತ್ತೆ. ಸಾಲ ಮರುಪಾವತಿಗೆ 3 ತಿಂಗಳ ಅವಕಾಶ ಇದ್ದು, 3 ತಿಂಗಳ ಬಡ್ಡಿ ಸರ್ಕಾರವೇ ಭರಿಸಲಿದೆ. ಪ್ಯಾಕೇಜ್ ನಲ್ಲಿ ಕಳೆದ ವರ್ಷದಂತೆ ಲೋಪ ಆಗದಂತೆ ಕ್ರಮವಹಿಸಲಾಗುತ್ತೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ 23 ರಂದು ತೀರ್ಮಾನ ಮಾಡ್ತೀವಿ ಎಂದು ಸಿಎಂ ತಿಳಿಸಿದರು.

ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗಿದೆ. ಈವರೆಗೆ 2.6 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ. ಇದಕ್ಕಾಗಿ 956 ಕೋಟಿ ಖರ್ಚು ಮಾಡಲಾಗುತ್ತದೆ. ಪ್ರತಿ ಪಂಚಾಯತಿಗೆ ಕೋವಿಡ್ ನಿರ್ವಹಣೆಗೆ 50 ಸಾವಿರ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಲೈನ್ ಮ್ಯಾನ್, ಗ್ಯಾಸ್ ತಲುಪಿಸೋರು, ಶಿಕ್ಷಕರು ಫ್ರಂಟ್ ಲೈನ್ ವರ್ಕರ್ಸ್ ಅಂತ ಸಿಎಂ ಘೋಷಣೆ ಮಾಡಿದರು.

ವಿಶೇಷ ಆರ್ಥಿಕ ಪ್ಯಾಕೇಜ್

 • ಕಟ್ಟಡ ಕಾರ್ಮಿಕರಿಗೆ 3ಸಾವಿರ ಸಹಾಯಧನ
 • ಬೀದಿಬದಿ ವ್ಯಾಪಾರಿಗಳಿಗೆ 3ಸಾವಿರ ಸಹಾಯಧನ
 • ಅಸಂಘಟಿತ ಕಾರ್ಮಿಕರಿಗೆ 2ಸಾವಿರ ಸಹಾಯಧನ
 • ಆಟೋ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರಿಗೆ 3ಸಾವಿರ
 • ಹೂ ಹಣ್ಣು ವ್ಯಾಪಾರಿಗಳಿಗೆ 3ಸಾವಿರ ಸಹಾಯಧನ
 • ಕಲಾವಿದರಿಗೆ ಕಲಾ ತಂಡಗಳಿಗೆ 3ಸಾವಿರ
 • ಇಂದಿರಾಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆ
 • ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ
  ಉಚಿತ ಚಿಕಿತ್ಸೆ
 • ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರ ಪ್ರದೇಶದಲ್ಲಿ ಉಚಿತ ಊಟದ ವ್ಯವಸ್ಥೆ
 • ಗರೀಬ್ ಕಲ್ಯಾಣ್ ಯೋಜನೆಅಡಿ ಉಚಿತ5kg ಅಕ್ಕಿ
 • ಎಪಿಎಲ್ ಕಾರ್ಡ್ ಬಳಕೆದಾರರಿಗೆ ಅಕ್ಕಿ kg15ರೂ
 • ಹೂ, ಹಣ್ಣು ತರಕಾರಿ ಬೆಳೆಗಾರರಿಗೆ ಹೆಕ್ಟೇರ್ ಗೆ10ಸಾವಿರ ಸಹಾಯಧನ

LEAVE A REPLY

Please enter your comment!
Please enter your name here