ಯಾಸ್ ಚಂಡಮಾರುತ| ದ.ಕ, ಉ.ಕ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

0
351
Tap to know MORE!

ಬೆಂಗಳೂರು, ಮೇ 25: ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಧಾರವಾಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಯಾಸ್ ಚಂಡಮಾರುತವು ಮೇ 26 ರಂದು ಪೂರ್ವ ಕರಾವಳಿಯನ್ನು ತಟ್ಟಲಿದ್ದು, ಗಂಟೆಗೆ 155 ರಿಂದ 165 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ನಂತರ ಇದು ಗಂಟೆಗೆ 185 ಕಿ.ಮೀ ವೇಗಕ್ಕೆ ವರ್ಧಿಸಲಿದೆ, ಭಾರಿ ಮಳೆಯಿಂದಾಗಿ ಬಾಲಸೋರ್‌ನಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here