ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ

0
115
Tap to know MORE!

ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಾಹನದ ಮುಖಾಂತರ ಧ್ವನಿವರ್ಧಕದಲ್ಲಿ
ಕೊರೊನಾ ಜಾಗೃತಿ ಅಭಿಯಾನ ಮತ್ತು ಕೋವಿಡ್ ಲಸಿಕೆ ಜಾಗೃತಿ ಅಭಿಯಾನ ನಡೆಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ,ಕೆಮ್ರಾಲ್ ಇದರ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಮಾರ್ಗರೇಟ್ ಸುದರ್ಶಿನಿ ಅವರು ಈ ಸಂದರ್ಭದಲ್ಲಿ ಮಾತನಾಡಿ ಸಾರ್ವಜನಿಕರು ಕೊರೋನ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೆ ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಈ ಮಹಾಮಾರಿಯ ವಿರುದ್ಧ ಹೋರಾಡಬೇಕು ಮತ್ತು ಪ್ರತಿಯೊಬ್ಬರೂ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದರು.

ಉಡುಪಿ: ಮಕ್ಕಳ ದತ್ತು ಸ್ವೀಕಾರ ಕೇಂದ್ರದ 12 ಮಕ್ಕಳು ಹಾಗೂ 9 ಸಿಬ್ಬಂದಿಗಳಿಗೆ ಕೊರೋನಾ!

ಈ ಅಭಿಯಾನದ ಅಂಗವಾಗಿ 10ನೇ ತೋಕೂರು, ಕೆರೆಕಾಡು, ಎಸ್ಕೊಡಿ, ಬೆಳ್ಳಾಯೂರು,ಕಲ್ಲಾಪು, ಪಡುಪಣಂಬೂರು,
ಹೊಯಿಗೆಗುಡ್ಡೆ,ಇಂದಿರಾ ನಗರ, ಹಳೆಯಂಗಡಿ ,ಲೈಟ್ ಹೌಸ್ ಗ್ರಾಮಗಳಲ್ಲಿ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಕೊರೋನಾ ಕುರಿತು ಮಾಹಿತಿಯನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಿಸುವ ಮೂಲಕ ಜನಜಾಗೃತಿಯನ್ನು ಮೂಡಿಸಲಾಯಿತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶ್ರೀ ವಿನೋದ್ ಕುಮಾರ್ ಬೊಳ್ಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಅನಿತಾ ಕ್ಯಾಥರಿನ್, ಪಂಚಾಯತ್ ಕಾರ್ಯದರ್ಶಿ ಶ್ರೀ ಲೋಕನಾಥ್ ಭಂಡಾರಿ, ತೋಕೂರು ಯುವಕ ಸಂಘದ ಅಧ್ಯಕ್ಷರಾದ ಶ್ರೀ ವಿನೋದ್ ಸುವರ್ಣ, ಆಶಾ ಕಾರ್ಯಕರ್ತೆಯರಾದ ಯಶೋದಾ ದೇವಾಡಿಗ,ಮತ್ತು ಲತಾ, ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು, ಸದಸ್ಯರು, ಇತರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಜಗದೀಶ್ ಕುಲಾಲ್ ವಂದಿಸಿದರು. ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here