ಜೂನ್ 14 ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144(3) ಜಾರಿ!

0
152
Tap to know MORE!

ಉಡುಪಿ: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜೂನ್ 14ರ ಬೆಳಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ಸಿ.ಆರ್‌.ಪಿ.ಸಿ ಸೆಕ್ಷನ್‌ 144(3)ನ್ನು ವಿಧಿಸಿದ್ದು, ಮದುವೆ ಸೇರಿದಂತೆ ಇನ್ನಿತರೆ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿದ್ದಾರೆ.

ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಿ.ಆರ್‌.ಪಿ.ಸಿ ಸೆಕ್ಷನ್‌ 144(3)ನ್ನು ಜೂನ್14ರ ಬೆಳಗ್ಗೆ 6ರವರೆಗೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.
ಮದುವೆ ಸೇರಿದಂತೆ ಇನ್ನಿತರೆ ಎಲ್ಲಾ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದ್ದು, ಶವಸಂಸ್ಕಾರಕ್ಕೆ ಗರಿಷ್ಠ 5 ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ವಿಮಾನ ಪ್ರಯಾಣ ಮತ್ತು ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಆಟೋ, ಕ್ಯಾಬ್‌, ಟ್ಯಾಕ್ಸಿಗಳ ಮೂಲಕ ಪ್ರಯಾಣಿಸುವವರು ಪ್ರಯಾಣದ ಟಿಕೆಟ್‌ಗಳನ್ನು ಪಾಸ್‌ಗಳಂತೆ ಬಳಸಿಕೊಳ್ಳಬಹುದಾಗಿದೆ ಎಂದು ಡಿಸಿ ಹೇಳಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ!

ಶೈಕ್ಷಣಿಕ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದು, ಆನ್‌ಲೈನ್‌ ಶಿಕ್ಷಣಕ್ಕೆ ಮಾತ್ರ ಅನುಮತಿಯನ್ನು ನೀಡಲಾಗಿದೆ. ಹೊಟೇಲ್ ಮತ್ತು ರೆಸ್ಟೊರೆಂಟ್ ಗಳಿಗೆ‌ ಪಾರ್ಸೆಲ್‌ ಮತ್ತು ಹೋಮ್‌ ಡೆಲಿವರಿ ಸೇವೆ ನೀಡಲು ಮಾತ್ರ ಅನುಮತಿ ನೀಡಲಾಗಿದೆ. ಕಾಲುನಡಿಗೆಯಲ್ಲಿ ತೆರಳಿ ಪಾರ್ಸೆಲ್‌ ಗಳನ್ನು ಪಡೆಯಲು ಅವಕಾಶವಿದ್ದು, ಹೋಮ್‌ ಡೆಲಿವರಿ ಮಾಡುವ ಹೋಟೆಲ್‌ಗ‌ಳಿಗೆ ಮಾತ್ರ ವಾಹನ ಉಪಯೋಗಿಸಲು ಅವಕಾಶ ನೀಡಲಾಗಿದೆ. ದೇವಸ್ಥಾನ, ಶಾಂಪಿಂಗ್‌ ಮಾಲ್‌, ಸಿನೆಮಾ, ಜಿಮ್‌, ಕ್ರೀಡಾಂಗಣ, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ತುರ್ತು ಸೇವೆಗಳು, ಅಗತ್ಯ ವಸ್ತುಗಳು ಹಾಗೂ ಸೇವೆಯನ್ನು ಪೂರೈಸುವ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯಾಚರಿಸಲಿದೆ. ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲ ಕೃಷಿ ಮತ್ತು ತತ್ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಬೆಳಗ್ಗೆ 6ರಿಂದ 10ರವರೆಗೆ ಅನುಮತಿ ನೀಡಲಾಗಿದೆ.

ಮೇಲಿನ ಆದೇಶ ಪಾಲಿಸದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದು, ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here