ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ತೀರ್ಪು ಪ್ರಕಟಿಸಿದ ನ್ಯಾಯಾಲಯ

0
239
Tap to know MORE!

ಉಡುಪಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ  ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಉಡುಪಿ ಜಿಲ್ಲಾ ನ್ಯಾಯಾಲಯ ಜೂ 8 ರಂದು  ತೀರ್ಪು ಪ್ರಕಟಿಸಿದೆ. ಪ್ರಕರಣದ ಮೂರು ಪ್ರಮುಖ ಆರೋಪಿಗಳು ದೋಷಿ  ಎಂದಿರುವ ನ್ಯಾಯಾಲಯ ಓರ್ವನನ್ನು ಆರೋಪದಿಂದ ಖುಲಾಸೆಗೊಳಿಸಿದೆ

ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ವಿಧಿಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಇನ್ನಷ್ಟೇ ಘೋಷಿಸಬೇಕಾಗಿದೆ. ಸುಮಾರು ಹತ್ಯೆ ನಡೆದ ಐದು ವರ್ಷಗಳ ಬಳಿಕ ತೀರ್ಪು ಹೊರ ಬಿದ್ದಿದೆ

ಜೂನ್ 21 ರಿಂದ ಕೋವಿಡ್ ಲಸಿಕೆ ಎಲ್ಲರಿಗೂ ಉಚಿತ: ಪ್ರಧಾನಿ ಮೋದಿ

ಘಟನೆ ಹಿನ್ನಲೆ: 
ಉದ್ಯಮಿ ಭಾಸ್ಕರ್ ಶೆಟ್ಟಿ 2016 ರ ಜುಲೈ 28 ರಂದು ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಮಣಿಪಾಲ ಪೊಲೀಸರು ಅವರ ಪತ್ನಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಭಾಸ್ಕರ್ ಶೆಟ್ಟಿ ಕೊಲೆ ವಿಚಾರ ಬಹಿರಂಗಗೊಂಡಿತ್ತು. ಇದೀಗ ಉಡುಪಿ ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿ ತೀರ್ಪು ನೀಡಿದೆ.

ಬಿಜೆಪಿ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಮುಖ್ಯಮಂತ್ರಿ ಯಡಿಯೂರಪ್ಪ

ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.

LEAVE A REPLY

Please enter your comment!
Please enter your name here