BIG NEWS| ಲಸಿಕೆ ಪಡೆಯಲು ಇನ್ನು ಮುಂದೆ ಆನ್ಲೈನ್ ನೋಂದಣಿ ಅಗತ್ಯವಿಲ್ಲ: ಕೇಂದ್ರ ಸರ್ಕಾರ

0
109
Tap to know MORE!

ನವದೆಹಲಿ: ಕೋವಿಡ್ ಲಸಿಕೆ ಪಡೆಯಲು ಮುಂಚಿತವಾಗಿ ಆನ್‌ಲೈನ್‌ ನೋಂದಣಿ ಹಾಗೂ ಕಾಯ್ದಿರಿಸುವಿಕೆ ಇನ್ನು ಮುಂದೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಗ್ರಾಮೀಣ ಭಾಗದ ಜನತೆ ಲಸಿಕೆ ಪಡೆಯಲು ತೊಂದರೆ ಪಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. 18 ವರ್ಷ ಮೇಲ್ಪಟ್ಟವರು ಆಯಾ ಲಸಿಕೆ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದಿದೆ.

ಗ್ರಾಮೀಣ ಭಾಗದ ಜನರಿಗೆ ಆನ್‍ಲೈನ್ ನೋಂದಣಿ ಕಷ್ಟವಾಗಿರುವ ಹಿನ್ನೆಲೆಯಲ್ಲಿ ಸಚಿವಾಲಯ ಈ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ಲಸಿಕೆ ಪಡೆಯಲು ರಿಜಿಸ್ಟ್ರೇಶನ್ ಮಾಡಿಕೊಳ್ಳುವುದು ಅಥವಾ ಅಪಾಯಿಂಟ್ಮೆಂಟ್ ಪಡೆದುಕೊಳ್ಳುವ ಅಗತ್ಯವಿಲ್ಲ.

ಜೂನ್ 21 ರಿಂದ ಕೋವಿಡ್ ಲಸಿಕೆ ಎಲ್ಲರಿಗೂ ಉಚಿತ: ಪ್ರಧಾನಿ ಮೋದಿ

ಆನ್‍ಲೈನ್ ನೋಂದಣಿ ಸಮಸ್ಯೆ ಹಿನ್ನೆಲೆ ಗ್ರಾಮೀಣ ಭಾಗದ ಜನರಿಗೆ ವ್ಯಾಕ್ಸಿನೇಷನ್ ಆಗಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಹೊಸ ಆದೇಶದನ್ವಯ 18 ವರ್ಷ ಮೇಲ್ಪಟ್ಟವರು ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ವ್ಯಾಕ್ಸಿನ್ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಲಸಿಕಾ ಕೇಂದ್ರದಲ್ಲಿಯೇ ನೋಂದಣಿ ವ್ಯವಸ್ಥೆ ಇರಲಿದೆ. ಜನರು ನೇರವಾಗಿ ನೋಂದಣಿ ಮಾಡಿಕೊಂಡು ಅದೇ ದಿನ ಲಸಿಕೆ ಪಡೆಯಬಹುದಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ರಿಜಿಸ್ಟ್ರೇಶನ್ ಮಾಡಿಕೊಳ್ಳುವುದು ಅಥವಾ ಅಪಾಯಿಂಟ್ಮೆಂಟ್ ಪಡೆದುಕೊಳ್ಳಲು ಗ್ರಾಮೀಣ ಭಾಗದ ಹಲವು ಮಂದಿ ಕಷ್ಟ ಅನುಭವಿಸ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಕಿಂಗ್ ಅವಶ್ಯಕತೆ ಇಲ್ಲ ಎಂದು ಸರ್ಕಾರ ತಿಳಿಸಿದೆ. ಇದಲ್ಲದೇ ಕೋವಿನ್ ಪೋರ್ಟಲ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳುವ ಮೂಲಕವೂ ಲಸಿಕೆ ಪಡೆದುಕೊಳ್ಳುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಐಎಎಸ್ ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್ ಕೊಡಲು ಮುಂದಾದ ‘ಸೂದ್ ಫೌಂಡೇಶನ್’

ಆನ್‍ಲೈನ್ ರಿಜಿಸ್ಟ್ರೇಶನ್ ಇಲ್ಲದೇ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳುವ ಪ್ರಕ್ರಿಯೆ ಯನ್ನು ವಾಕ್ ಇನ್ ಅಂತಾ ಕರೆಯುತ್ತಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕೋ-ವಿನ್‍ನಲ್ಲಿ ರಾಜ್ಯಗಳು ಗ್ರಾಮೀಣ ಅಥವಾ ನಗರ ಎಂದು ವರ್ಗೀಕರಿಸಿದ್ದು, ಒಟ್ಟು 69,995 ವ್ಯಾಕ್ಸಿನೇಷನ್ ಕೇಂದ್ರಗಳು ಇವೆ.

49,883 ವ್ಯಾಕ್ಸಿನೇಷನ್ ಕೇಂದ್ರಗಳು, ಅಂದರೆ 71% ಗ್ರಾಮೀಣ ಪ್ರದೇಶಗಳಲ್ಲಿವೆ. ಅತಿ ಹೆಚ್ಚು ವ್ಯಾಕ್ಸಿನೇಷನ್ ಸೆಂಟರ್ ಗ್ರಾಮೀಣ ಭಾಗದ ಕಡೆ ಇರುವುದರಿಂದ ಆನ್ ರಿಜಿಸ್ಟ್ರೇಶನ್ ದೊಡ್ಡ ಸಮಸ್ಯೆ ಆಗ್ತಿದೆ ಎಂಬುದು ವರದಿಯಾಗಿದೆ. ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗುತ್ತೆ ಅಂತಾ ಆನ್‍ಲೈನ್ ನೋಂದಣಿ ರದ್ದುಗೊಳಿಸಿ ನೇರವಾಗಿ ಹತ್ತಿರದ ಲಸಿಕಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here