ತೋಕೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

0
233
Tap to know MORE!

ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್®️ತೋಕೂರು, ಇದರ ಆಶ್ರಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. “ಯೋಗಾಭ್ಯಾಸದೊಂದಿಗೆ ಇರಿ, ಮನೆಯಲ್ಲೇ ಇರಿ” (BE WITH YOGA, BE AT HOME) ಎಂಬ ಘೋಷ ವಾಕ್ಯದೊಂದಿಗೆ ಸಂಸ್ಥೆಯ ಸಭಾಂಗಣದಲ್ಲಿ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ, ಸರಕಾರದ ನಿಯಮಾವಳಿಗಳನ್ನು ಅನುಸರಿಸಿ ಯೋಗ ದಿನವನ್ನು ಆಚರಿಸಲಾಯಿತು.

ವಿಪ್ರ ಸಂಪದ ಪುನರೂರು ಇದರ ಸ್ಥಾಪಕ ಅಧ್ಯಕ್ಷರು ಸುರೇಶ್ ರಾವ್ ಪುನರೂರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ವಿಪ್ರ ಸಂಪದ ಪುನರೂರು ಇದರ ಅಧ್ಯಕ್ಷರಾದ ಜನಕ ರಾಜ್ ರಾವ್, ಕಾರ್ಯದರ್ಶಿ ಸುಧಾಕರ್ ರಾವ್, ಯೋಗ ಶಿಕ್ಷಕರು ಕುಮಾರ್, ಗ್ರಾಮ ಪಂಚಾಯತ್ ಪಡುಪಣಂಬೂರು ಇದರ ಸದಸ್ಯರು ಮೋಹನ್ ದಾಸ್ , ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಸಂತೋಷ್ ದೇವಾಡಿಗ ಆಸೀನರಾಗಿದ್ದರು.

ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯ ಅಧಿಕಾರಿ ಶ್ರೀ ರಘುವೀರ್ ಸೂಟರ್ ಪೇಟೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಸಿ “ಇಂದು ದೇಶದೆಲ್ಲೆಡೆ ಜನರು ಕೊರೋನಾ ಮಾಹಾಮಾರಿಯ ಕಾರಣದಿಂದಾಗಿ ತತ್ತರಿಸಿ, ಆರೋಗ್ಯ ಚಿಂತೆಯ ಜೊತೆಗೆ ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡದಿಂದ ದಿನಕಳೆಯುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ನೆಮ್ಮದಿಯನ್ನು ಕೂಡ ಪಡೆಯಲು ಬಹು ಸಹಕಾರಿಯಾಗಿದೆ” ಎಂದರು.

ಯೋಗ ಶಿಕ್ಷಕರಾದ ಶ್ರೀ ಕುಮಾರ್ ಯೋಗದ ಮಹತ್ವವನ್ನು ತಿಳಿಸಿ ಯೋಗಾಭ್ಯಾಸದ ತರಬೇತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷರು ಸುರೇಶ್ ಶೆಟ್ಟಿ, ಸಂಸ್ಥೆಯ ಸದಸ್ಯರಾದ ಮಹೇಶ್ ಸುವರ್ಣ,ಸುಭಾಸ್ ಅಮೀನ್,ಧರ್ಮಾನಂದ ಶೆಟ್ಟಿಗಾರ್, ಗಣೇಶ್ ಅಮೀನ್ ಉಪಸ್ಥಿತರಿದ್ದರು.

ಕೊರೋನಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮಾರ್ಗಸೂಚಿಯಂತೆ ಮತ್ತು ಅತೀ ಮುಖ್ಯವಾಗಿ ಕಾಪಾಡಿಕೊಳ್ಳಲೇ ಬೇಕಾಗಿರುವ ಸಾಮಾಜಿಕ ಅಂತರಕ್ಕಾಗಿ ಗೂಗಲ್ ಮೀಟ್ ಆನ್ ಲೈನ್ ಆ್ಯಪ್ ಮುಖಾಂತರ ಈ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗಿತ್ತು.

ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು ಸಂತೋಷ್ ದೇವಾಡಿಗ ಸ್ವಾಗತಿಸಿದರ. ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ವಂದಿಸಿದರು ಹಾಗೂ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here