ದ.ಕ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ: ನೈಟ್ ಹಾಗೂ ವೀಕೆಂಡ್ ಕರ್ಫ್ಯೂಗೆ ಮಾರ್ಗಸೂಚಿ ಬಿಡುಗಡೆ

0
429
Tap to know MORE!

ಮಂಗಳೂರು: ಕೊರೋನಾ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ ಮತ್ತೆ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈ ಬಗ್ಗೆ ರಾಜ್ಯ ಸರಕಾರ ಅಧಿಕೃತ ಮಾರ್ಗಸೂಚಿ ಹೊರಡಿಸಿದೆ. ಆಗಸ್ಟ್ 6 (ಇಂದು) ರಾತ್ರಿಯಿಂದ ಆಗಸ್ಟ್ 16ರ ತನಕ ಮಾರ್ಗಸೂಚಿ ಕರ್ನಾಟಕ ರಾಜ್ಯದಲ್ಲಿ ಜಾರಿಯಲ್ಲಿರಲಿದೆ.

ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜ ನಗರ ಹಾಗೂ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ (ಶನಿವಾರ, ಆದಿತ್ಯವಾರ) ಜಾರಿಯಲ್ಲಿರಲಿದೆ. ಉಳಿದಂತೆ ರಾಜ್ಯದೆಲ್ಲೆಡೆ ನೈಟ್ ಕರ್ಫ್ಯೂ ಇಂದಿನಿಂದಲೇ ಜಾರಿಗೆ ಬಂದಿದೆ.

ಆಗಸ್ಟ್ 11 ರಿಂದ ಮಂಗಳೂರು ವಿವಿ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆ ಮುಂದುವರೆಸಲು ಜಿಲ್ಲಾಧಿಕಾರಿ ಆದೇಶ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ರಾಜ್ಯ ಸರಕಾರದ ಮಾರ್ಗಸೂಚಿಯಲ್ಲಿ ಏನಿದೆ?

 • ಸರ್ಕಾರಿ ಕಚೇರಿ, 24 ಗಂಟೆ ಕಾರ್ಯಾಚರಿಸುವ ಕೈಗಾರಿಕೆ ತೆರೆಯಬಹುದು
 • ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ತನಕ ಅಗತ್ಯ ವಸ್ತು ಪಡೆಯಲು ಅವಕಾಶ
 • ಮಧ್ಯ ಮಾರಾಟ – ಪಾರ್ಸೆಲ್ ಮಾತ್ರ ಅವಕಾಶ (ಬೆಳಗ್ಗೆ 5ರಿಂದ ಮಧ್ಯಾಹ್ನ 2)
 • ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಪಾರ್ಸೆಲ್, ಹೋಂ ಡೆಲಿವರಿಗೆ ಅವಕಾಶ
 • ವಿಮಾನ ನಿಲ್ದಾಣ, ರೈಲ್ವೇ ಪ್ರಯಾಣಕ್ಕೆ ಅನುಮತಿ – ಪ್ರಯಾಣದ ಟಿಕೆಟ್ ಕಡ್ಡಾಯ
 • ರಾಜಕೀಯ, ಕ್ರೀಡೆ, ಮನೋರಂಜನೆ, ಸಾಂಸ್ಕೃತಿಕ, ಧಾರ್ಮಿಕ ಸಭೆ, ಸಮಾರಂಭ ನಿಷೇಧ
 • ಮದುವೆಗೆ ಅವಕಾಶ- 100 ಜನರೊಂದಿಗೆ ನಡೆಸಲು ಅವಕಾಶ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆಗೆ 50 ಜನರಿಗೆ ಮಾತ್ರ ಅವಕಾಶ ಇರಲಿದೆ.
 • ಅಂತಿಮ ಸಂಸ್ಕಾರಕ್ಕೆ 20 ಜನರಿಗೆ ಅವಕಾಶ
 • ರಾತ್ರಿ 9ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

ವಾರಾಂತ್ಯ ಕರ್ಫ್ಯೂ ವಿವರ:

 • ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧೀನದ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳು, ಕಾರ್ಪೋರೇಷನ್ ಇತ್ಯಾದಿಗಳು, ತುರ್ತು ಮತ್ತು ಅತ್ಯವಶ್ಯಕ ಸೇವೆಗಳು ಹಾಗೂ ಕೋವಿಡ್ 19 ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಇಲಾಖೆ / ಕಚೇರಿಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಅಡ್ಡಿ ಇರುವುದಿಲ್ಲ.
 • ತುರ್ತು ಮತ್ತು ಅತ್ಯವಶ್ಯಕ ಸೇವೆಗಳನ್ನು ನೀಡುವ ಎಲ್ಲಾ ಕೈಗಾರಿಕೆ / ಕಂಪೆನಿಗಳು / ಸಂಸ್ಥೆಗಳ ಕಾರ್ಯಾಚರಣೆ ಹಾಗೂ ಅದರ ಸಿಬ್ಬಂದಿಗಳ ಓಡಾಟಕ್ಕೆ ಅಡ್ಡಿ ಇರುವುದಿಲ್ಲ. ಆದಾಗ್ಯೂ ಅವರುಗಳು ಸಂಸ್ಥೆ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿರತಕ್ಕದ್ದು.
 • ವೈದ್ಯಕೀಯ ಸೇವೆಯ ಸಂಬಂಧ ರೋಗಿಯೊಂದಿಗೆ ರೋಗಿಯ ಉಪಚಾರಕರ ಓಡಾಟಕ್ಕೆ ಅಡ್ಡಿ ಇರುವುದಿಲ್ಲ.
 • ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುತ್ತಾ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್ ಗಳು, ಪಶು ಆಹಾರ ಮಳಿಗೆಗಳು, ಬೀದಿ ಬದಿ ವ್ಯಾಪಾರಿಗಳಿಗೆ, ಪಡಿತರ ನ್ಯಾಯ ಬೆಲೆ ಮಳಿಗೆ, ಸ್ಟಾಂಡ್ ಅಲೋನ್ ಮದ್ಯ ಮಾರಾಟ ಮಳಿಗೆ ( ಟೇಕ್ ಅವೇ ರೂಪದಲ್ಲಿ) ಬೆಳಗ್ಗೆ 5:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕಾರ್ಯಾಚರಿಸಲು ಅವಕಾಶ ಇರುತ್ತದೆ. ಹೋಂ ಡೆಲಿವರಿ ಪದ್ದತಿಗೆ ಉತ್ತೇಜನ ನೀಡುವುದು.
 • ರೆಸ್ಟೋರೆಂಟ್ ಮತ್ತು ಆಹಾರ ಮಳಿಗೆಗಳಿಂದ ಟೇಕ್ ಅವೇ ರೂಪದಲ್ಲಿ ಪಡೆಯಲು ಹಾಗೂ ಹೋಂ ಡೆಲಿವರಿಗೆ ಅವಕಾಶ ಇರುತ್ತದೆ.
 • ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ/ಸ್ಟಾಪ್/ಸ್ಟಾಂಡ್ ಗಳಿಂದ ಪ್ರಯಾಣಿಕರನ್ನು ಕರೆತರಲು / ಕರೆದೊಯ್ಯಲು ಸಾರ್ವಜನಿಕ ಸಾರಿಗೆ, ಖಾಸಗಿ ಸಾರಿಗೆ ಮತ್ತು ಟ್ಯಾಕ್ಸಿಗಳಿಗೆ ಅನುಮತಿಸಿದೆ. ಆದಾಗ್ಯೂ ಪ್ರಯಾಣಿಕರು ಅಧಿಕೃತ ಟಿಕೆಟ್ ನ್ನು ಹೊಂದಿರ ತಕ್ಕದ್ದು ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸತಕ್ಕದ್ದು.
 • ಮದುವೆ / ಕೌಟುಂಬಿಕ ಕಾರ್ಯಗಳಿಗೆ ಗರಿಷ್ಟ 100 ಮಂದಿ ಮೀರತಕ್ಕದ್ದಲ್ಲ. ಅಂತ್ಯ ಸಂಸ್ಕಾರ ಮುಂತಾದ ಕಾರ್ಯಕ್ರಮಗಳಲ್ಲಿ ಗರಿಷ್ಟ 20 ಮಂದಿ ಮೀರತಕ್ಕದ್ದಲ್ಲ. ಎಲ್ಲಾ ಕಡೆ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸತಕ್ಕದ್ದು

LEAVE A REPLY

Please enter your comment!
Please enter your name here