FLASH| SSLC ಪರೀಕ್ಷೆ ಫಲಿತಾಂಶ ಪ್ರಕಟ | ಗ್ರೇಡ್‌ನಲ್ಲಿ ಫಲಿತಾಂಶ

0
414
Tap to know MORE!

ಬೆಂಗಳೂರು,ಆಗಸ್ಟ್‌ 09: 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಶಿಕ್ಷಣ ಸಚಿವ ನಾಗೇಶ್ ಫಲಿತಾಂಶ ಘೋಷಣೆ ಮಾಡಿದ್ದಾರೆ. ಮಧ್ಯಾಹ್ನ 3.30ಕ್ಕೆ ಪತ್ರಿಕಾ ಗೋಷ್ಠಿ ನಡೆಸಿದ ಅವರು ಫಲಿತಾಂಶ ಪ್ರಕಟಗೊಳಿಸಿದ್ದಾರೆ.

ಈ ಬಾರಿ ಕೊರೊನಾ ಆತಂಕದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸುವಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಯಶ್ವಸಿಯಾಗಿತ್ತು. ಎರಡು ದಿನಗಳ ಕಾಲ ಆರು ವಿಷಯಗಳ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶೇಷವಾದ ಒಎಂಆರ್ ಉತ್ತರ ಪತ್ರಿಕೆಗಳನ್ನು ಬಳಸಲಾಗಿತ್ತು. ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಪರಿಚಯಿಸಲಾಗಿತ್ತು. ಈ ಒಎಂಆರ್ ಶೀಟ್ ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ಎಲ್ಲಾ ವಿದ್ಯಾರ್ಥಿಗಳು ಪಾಸ್!

ಇದೇ ಮೊದಲ ಬಾರಿ ಶೇ 100ರಷ್ಟು ಫಲಿತಾಂಶ ಬಂದಿದೆ. ಇದರೊಂದಿಗೆ ಮೊದಲ ಬಾರಿ 8.74 ಲಕ್ಷ ವಿದ್ಯಾರ್ಥಿಗಳು ಪಾಸ್‌ ಆಗಿರುವುದಾಗಿ ಮಾಹಿತಿ ನೀಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಒಸಿಆರ್ ಮಾದರಿ ಪರೀಕ್ಷೆ ಯಶಸ್ವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎ,ಎ+, ಬಿ, ಬಿ+, ಸಿ + ಮಾದರಿ ಗ್ರೇಡ್ ನೀಡಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಫಲಿತಾಂಶ ಪರಿಶೀಲನೆ ನಡೆಸುವುದು ಹೇಗೆ?

  • ಪರೀಕ್ಷಾ ಫಲಿತಾಂಶ ವಿದ್ಯಾರ್ಥಿಗಳ ಮೊಬೈಲ್‌ಗೆ ರವಾನೆ ಮಾಡಲಾಗುವುದು.
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ (http://kseeb.kar.nic.in) ಅಥವಾ karresult.nic.inಗೆ ಭೇಟಿ ನೀಡಿ ಅಲ್ಲಿ ಫಲಿತಾಂಶಗಳನ್ನು ಪರಿಶೀಲನೆ ಮಾಡಬಹುದು.
  • ವೆಬ್‌ಸೈಟ್‌ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.

LEAVE A REPLY

Please enter your comment!
Please enter your name here