13ನೇ ಆವೃತ್ತಿಯ ಐಪಿಎಲ್ ನಲ್ಲಿ ಡೆಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕೆವಿನ್ ಪೀಟರ್ಸನ್

0
213
Tap to know MORE!

ಕೊರೋನಾ ಸೋಂಕಿನ ಹಾವಳಿಯಿಂದಾಗಿ ತವರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಟೂರ್ನಿ ಈ ವರ್ಷ ಯುಎಇ ನಲ್ಲಿ ನಡೆಯುತ್ತಿದೆ. ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ಈ ನಡುವೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದು ನಿಶ್ಚಿತ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೀಟರ್ಸನ್ ಆಡುವ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಡೇರ್ ಡೆವಿಲ್ಸ್ ಮತ್ತು ರೈಸಿಂಗ್ ಪುಣೆ ತಂಡವನ್ನು ಪ್ರತಿನಿಧಿಸಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಈ ಬಾರಿ ಶ್ರೇಯಸ್ಸು ಮುನ್ನಡೆಸುತ್ತಿದ್ದಾರೆ. ಶಿಖರ್ ಧವನ್, ರವಿ ಅಶ್ವಿನ್ ಮತ್ತು ಅಜಿಂಕ್ಯಾ ರಹಾನೆ ಮತ್ತಿತರರು ಆ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ಈ ಕುರಿತು ಇನ್ಸಾಟಾಗ್ರಾಮ್ ನಲ್ಲಿ ಮಾಹಿತಿ ನೀಡಿರುವ ಅವರು, ನಾವು ಮತ್ತೆ ಕ್ರಿಕೆಟ್ ಗೆ ಮರಳಿರುವುದು ಖುಷಿಯಾಗಿದೆ. ಐಪಿಎಲ್ 2020ರಲ್ಲಿ ಕೆಲಸ ಮಾಡುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಈ ಸಲ ಡೆಲ್ಲಿ ಕ್ಯಾಪಿಟಲ್ ಕಪ್ ಮುಡಿಗೇರಿಸುವುದು ಖಚಿತ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here