ಬೆಡ್ ಬ್ಲಾಕಿಂಗ್ : ಕೇವಲ ಮುಸ್ಲಿಂ ಯುವಕರ ಹೆಸರು ಓದಿದ್ದಕ್ಕೆ ಕ್ಷಮೆಯಾಚಿಸಿದ ಸಂಸದ ತೇಜಸ್ವಿ ಸೂರ್ಯ?

0
439
Tap to know MORE!

ಬೆಂಗಳೂರು, ಮೇ 7: ಕೆಲ ಮಾಧ್ಯಮಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ (ಮೇ 5) ಸಂಜೆ 7 ಗಂಟೆಗೆ ಬೆಂಗಳೂರು ದಕ್ಷಿಣ ಕೋವಿಡ್ ವಾರ್ ರೂಂಗೆ ಭೇಟಿ ನೀಡಿ, ಅಲ್ಲಿ ಕೆಲಸ ಮಾಡುತ್ತಿದ್ದ 200 ಜನರ ಕ್ಷಮೆಯಾಚಿಸಿದ್ದಾರೆ ಎಂಬ ಸುದ್ದಿಯನ್ನು ಸಂಸದ ತೇಜಸ್ವಿ ಸೂರ್ಯ ಅವರ ಅಧಿಕೃತ ಕಚೇರಿ ಅಲ್ಲಗೆಳೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಉಚಿತ ಆಕ್ಸಿಜನ್ ಪೂರೈಕೆ

ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಕೋವಿಡ್ ವಾರ್ ರೂಂ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ 17 ಮುಸ್ಲಿಂ ಯುವಕರ ಹೆಸರನ್ನು ಓದಿದ್ದು, ಅವರು ಕೋವಿಡ್ ಬೆಡ್ ಬ್ಲಾಕಿಂಗ್ ಹಗರಣದ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಕೋವಿಡ್ ವಾರ್ ರೂಂಗೆ ತೆರಳಿ ಕ್ಷಮೆ ಕೋರಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ, ಒಬ್ಬರಿಗೆ ಸುದ್ದಿ ಇಲ್ಲದಿದ್ದಾಗ, ಅವರು ನಕಲಿ ಸುದ್ದಿಗಳನ್ನು ಸೃಷ್ಠಿಸುತ್ತಾರೆ ಎಂದು ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here