ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ಗುರುವಾರ ನಡೆದ ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆಯಲ್ಲಿ ಸುಮಾರು 23 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದರೆ.
ಇಂಗ್ಲೀಷ್ ಪರೀಕ್ಷೆಗೆ ಗೈರಾದ ಎಲ್ಲ ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆಯಲ್ಲಿ ಭಾಗಿಯಾಗಲು ಪಿಯು ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಇವರನ್ನು ರೆಗ್ಯುಲರ್ ವಿದ್ಯಾರ್ಥಿಗಳೆಂದೇ ಪರಿಗಣಿಸಲಾಗುವುದು ಎಂದು ಇಲಾಖೆ ಹೇಳಿದೆ.
ಇಂಗ್ಲೀಷ್ ಪರೀಕ್ಷೆಗೆ 5, 96,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 5,72,665 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 23,635 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ದ.ಕ, ಉಡುಪಿ ಗರಿಷ್ಠ ಹಾಜರಾತಿ
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಹೆಚ್ಚಿನ ಗೈರು ಕಂಡುಬಂದಿಲ್ಲ. ಉಡುಪಿಯಲ್ಲಿ ಕೇವಲ 163 ಮತ್ತು ದಕ್ಷಿಣ ಕನ್ನಡದಲ್ಲಿ 466 ಮಂದಿ ಗೈರಾಗಿದ್ದರು. ಕಂಟೈನ್ಮೆಂಟ್ ಝೋನ್ ನಲ್ಲಿ ವಾಸವಾಗಿರುವ ವಿದ್ಯಾರ್ಥಿಗಳು ಮತ್ತು ಜ್ವರ ಲಕ್ಷಣಗಳಿದ್ದ ಸುಮಾರು 12 ಮಂದಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.